ಕಾರ್ಕಳ: ಬಾವಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ರಕ್ಷಣೆ:ಅಗ್ನಿಶಾಮಕ ಇಲಾಖೆಯಿಂದ ಸಾಹಸಮಯ ಕಾರ್ಯಾಚರಣೆ
ಉಡುಪಿ: ಬಾವಿಗೆ ಇಳಿದು ಮಣ್ಣು ತೆಗೆಯುತ್ತಿದ್ದ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಮೂವರು ಕಾರ್ಮಿಕರನ್ನು ಕಾರ್ಕಳ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸಾಹಸಮಯ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಸಮೀಪದ ಅಶ್ವಥಪುರ ಎಂಬಲ್ಲಿ ಈ ಘಟನೆ ನಡೆದಿದೆ.ರಾಜೇಶ್ (42), ಪವನ್ (29) ಹಾಗೂ ಗೋಪಾಲ್ ನಾಯ್ಕ (52) ಬಾವಿಯ ಮಣ್ಣು ತೆಗೆಯುವ ಕೆಲಸಕ್ಕಾಗಿ ಬಾವಿಗಿಳಿದಿದ್ದರು. ಈ ವೇಳೆ ಮೇಲಕ್ಕೆ ಬರುತ್ತಿದ್ದ ರಾಜೇಶ್ ಅವರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ರಕ್ಷಿಸಲು ಮುಂದಾದ ಪವನ್ ಹಾಗೂ ಗೋಪಾಲ್…
