ಪ್ರಧಾನಿ ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ; ಎನ್‌ಐಎ ತನಿಖೆ ಆರಂಭ
ಬೆಂಗಳೂರು: ನಗರದ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆಯಾಗಿರುವ ಘಟನೆ ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ National Investigation Agency (ಎನ್‌ಐಎ) ತನಿಖೆಗೆ ಇಳಿದಿದ್ದು, ಭದ್ರತಾ ಲೋಪದ ಕುರಿತು ಸವಿಸ್ತಾರ ಪರಿಶೀಲನೆ ಆರಂಭಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳ ತಂಡವು ಸ್ಫೋಟಕ ಪತ್ತೆಯಾದ ಪ್ರದೇಶವನ್ನು ಕೂಲಂಕಷವಾಗಿ ಪರಿಶೀಲಿಸಿದೆ. ಬೆಂಗಳೂರು ದಕ್ಷಿಣ ವಿಭಾಗದ ಎಸ್‌ಪಿ ಶ್ರೀನಿವಾಸ ಗೌಡರಿಂದ ಪ್ರಾಥಮಿಕ ತನಿಖಾ ವರದಿ…
