ಅಪೂರ್ಣ ಚತುಷ್ಪಥ ರಸ್ತೆ ವಿರುದ್ಧ ಸುರತ್ಕಲ್‌ನಲ್ಲಿ ರಸ್ತೆ ತಡೆ: ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಸುರತ್ಕಲ್ :ಕಾನ -ಎಂ.ಅರ್.ಪಿ.ಎಲ್ . ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ನಾಗರಿಕರ ಸುಧೀರ್ಘ ಹೋರಾಟದ ಬಳಿಕ ಚತುಷ್ಪಥ ರಸ್ತೆ ಕಾಮಗಾರಿ ನಡೆಸಲು ಸರಕಾರ ಅನುದಾನ ಬಿಡುಗಡೆ…
