​ಕೇರಳ ಚುನಾವಣಾ ಫಲಿತಾಂಶ: ಎಡಕೋಟೆ ನಡುಗಿಸಿದ ಯುಡಿಎಫ್ ಸುನಾಮಿ: ಕಮಲ ಪಾಳಯದಲ್ಲಿ ಹೊಸ ಸಂಚಲನ

​ ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಇಡೀ ರಾಜ್ಯದಲ್ಲಿ ಯುಡಿಎಫ್ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ಭದ್ರವಾಗಿದ್ದ ಎಡರಂಗದ ಕೋಟೆ ಈ ಬಾರಿ ಧರಾಶಾಯಿಯಾಗುವ ಲಕ್ಷಣಗಳು ಕಾಣಿಸುತ್ತಿವೆ.​ ಬೆಳಿಗ್ಗೆ 10:20ರ ವೇಳೆಗೆ​ಯುಡಿಎಫ್: 91 ಸ್ಥಾನಗಳಲ್ಲಿ ಮುನ್ನಡೆ​ಎಲ್ ಡಿ ಎಫ್: 46 ಸ್ಥಾನಗಳಲ್ಲಿ ಮುನ್ನಡೆ​ಎನ್ ಡಿಎ: 02 ಸ್ಥಾನಗಳಲ್ಲಿ ಮುನ್ನಡೆ​ ​ ಕಣ್ಣೂರಿನ ಧರ್ಮಡಂ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೇ ಆರಂಭಿಕ ಹಿನ್ನಡೆ ಅನುಭವಿಸಿರುವುದು…

Read More

ಉಡುಪಿಯಲ್ಲಿ ಮೇ 3ರಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯು 2025ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ, ದೀ. ಕರ್ಕಿ ಹಿರಿಯ ಪರಮಯ್ಯ ಹಾಸ್ಯಗಾರ ಇವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ಹಾಗೂ 2024ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೇ.3ರಂದು ಮಧ್ಯಾಹ್ನ 1 ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷ ಯು.ಟಿ…

Read More

ಕರಾವಳಿಗೆ ಹೈಕೋರ್ಟ್ ಪೀಠ ಹೋರಾಟಕ್ಕೆ ವೇಗ: ಐವನ್ ಡಿಸೋಜ

ಮಂಗಳೂರು: ಕರಾವಳಿ ಭಾಗಕ್ಕೆ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಇತ್ತೀಚಿನ ದಿನಗಳಲ್ಲಿ ಮತ್ತಷ್ಟು ವೇಗ ದೊರೆತಿದ್ದು, ವಿವಿಧ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ಐವನ್ ಡಿಸೋಜ ತಿಳಿಸಿದ್ದಾರೆ. ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಪೀಠಕ್ಕೆ ಅನುಮತಿ ದೊರಕಿದ ಕೂಡಲೇ ಪ್ರಾರಂಭಿಕವಾಗಿ ಹಳೆಯ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಕಾರ್ಯಾಚರಣೆ ಆರಂಭವಾಗಲಿದ್ದು, ನಂತರ ಸೂಕ್ತ ಸ್ಥಳದಲ್ಲಿ…

Read More

ಬಿ.ಎಸ್.ವೈ ಅಭಿಮಾನೋತ್ಸವಕ್ಕೆ ಡಿಕೆ ಬಿಜೆಪಿ ಸಜ್ಜು: ವಾಹನ ಸ್ಟಿಕ್ಕರ್ ಅಭಿಯಾನಕ್ಕೆ ಚಾಲನೆ

ಮಂಗಳೂರು, ಮೇ 2: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಂಭ್ರಮಾಚರಣೆಯ ಅಂಗವಾಗಿ ಚಿತ್ರದುರ್ಗದಲ್ಲಿ ನಡೆಯಲಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಹಿನ್ನೆಲೆ, ದಕ್ಷಿಣ ಕನ್ನಡ ಭಾರತೀಯ ಜನತಾ ಪಾರ್ಟಿ ವತಿಯಿಂದ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ನಗರದ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಇದೇ ತಿಂಗಳ 9ರಂದು ನಡೆಯಲಿರುವ ಅಭಿಮಾನೋತ್ಸವಕ್ಕೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಯಡಿಯೂರಪ್ಪ…

Read More

ತೂಮಿನಾಡಿನಲ್ಲಿ ನೀರಿಗಾಗಿ ಹಾಹಾಕಾರ: ಪಂಚಾಯತ್ ತುರ್ತು ನೆರವು, ಜಲ ಪ್ರಾಧಿಕಾರಕ್ಕೆ ಪ್ರಶ್ನೆ

​ಮಂಜೇಶ್ವರ: ತೂಮಿನಾಡಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಪಂಚಾಯತ್‌ನಿಂದ ತುರ್ತು ನೀರು ಸರಬರಾಜು : ಗ್ರಾಮಸ್ಥರಿಂದ ಮೆಚ್ಚುಗೆ : ನಿದ್ರೆಗೆ ಜಾರಿದ ಕೇರಳ ನೀರು ಸರಬರಾಜು ವ್ಯವಸ್ಥೆ ​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ತೂಮಿನಾಡು ಪ್ರದೇಶದಲ್ಲಿ ಬೇಸಿಗೆಯ ತಾಪದೊಂದಿಗೆ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಕಠಿಣ ಪರಿಸ್ಥಿತಿಯನ್ನು ಮನಗಂಡು ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ವಾರ್ಡ್ ಸದಸ್ಯರಾದ ಇಲ್ಯಾಸ್ ತೂಮಿನಾಡು ಅವರ ವಿಶೇಷ ಮುತುವರ್ಜಿಯಿಂದಾಗಿ ಇದೀಗ ಗ್ರಾಮದ ಮನೆ ಮನೆಗಳಿಗೆ ನೀರಿನ…

Read More

ಬಿಎಸ್ ವೈ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 5 ಸಾವಿರ ಕಾರ್ಯಕರ್ತರು

ಮಂಗಳೂರು, ಮೇ 2: “ಬಿಎಸ್ ವೈ ಅಭಿಮಾನೋತ್ಸವ” ಕಾರ್ಯಕ್ರಮ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಮಾರು 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಿಶೋರ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯ ವಿವಿಧ ಭಾಗಗಳಿಂದ ಕಾರ್ಯಕರ್ತರನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಹಿಂದುಳಿದ ವರ್ಗಗಳ…

Read More

ಸಿಎಂ ಗಾದಿ ಪೈಪೋಟಿಯೇ ಸರ್ಕಾರದ 3 ವರ್ಷದ ಸಾಧನೆ: ಸತೀಶ್ ಕುಂಪಲ

ಮಂಗಳೂರು, ಮೇ 2: ರಾಜ್ಯ ಸರ್ಕಾರ ಆಡಳಿತ ಹಾಗೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪೈಪೋಟಿಯೇ ಕಳೆದ ಮೂರು ವರ್ಷಗಳ ಸರ್ಕಾರದ ಸಾಧನೆಯಾಗಿದೆ ಎಂದು ಸತೀಶ್ ಕುಂಪಲ ಟೀಕಿಸಿದ್ದಾರೆ. ಮಂಗಳೂರಿನ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿದರು. ಸರ್ಕಾರವೇ ಘೋಷಿಸಿದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸಹ ಸಮರ್ಪಕವಾಗಿ ಸೌಲಭ್ಯಗಳು ತಲುಪುತ್ತಿಲ್ಲ ಎಂದರು. ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗದೆ ಜನರು…

Read More

ಕೊರಿಂಗಿಲ ಜುಮಾ ಮಸೀದಿಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಪುತ್ತೂರು : ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ಕೊರಿಂಗಿಲ ಜುಮಾ ಮಸೀದಿಯಲ್ಲಿ ನಡೆಯಿತು. ಕೊರಿಂಗಿಲ ಜಮಾಅತ್ ನ ಸದಸ್ಯರಾದ ಶಾಹುಲ್ ಹಮೀದ್ KMK ಹಾಗೂ ಪುತ್ತುಚ್ಚ ಗುಂಡ್ಯಡ್ಕ ಇವರು ಹಜ್ ಯಾತ್ರೆ ಕೈಗೊಳ್ಳುತ್ತಿದ್ದು ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಡಲಾಯಿತು. ಖತೀಬರಾದ ಬಹು. ಅಲ್ಹಾಜ್ GH ಅಯ್ಯೂಬ್ ವಹಬಿ, KJM ಅಧ್ಯಕ್ಷರಾದ ಜ. ಮುಹಮ್ಮದ್ ಕುಂಞ ಹಾಜಿ, ಪ್ರಧಾನ ಕಾರ್ಯದರ್ಶಿ ಮೂಸೆ ಕುಂಞ ಬೆಟ್ಟoಪಾಡಿ, ಕೋಶಾಧಿಕಾರಿ ಮುಹಮ್ಮದ್ ಹಾಜಿ ಶಾಲಾಬಳಿ, ಉಪಾಧ್ಯಕ್ಷರಾದ ಆಲಿ ಕುoಞ ಹಾಜಿ, ಹಮೀದ್…

Read More

ವಾಣಿಜ್ಯ ಎಲ್‌ಪಿಜಿ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ವಿಚಾರಕ್ಕೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಆರ್ಥಿಕತೆಯನ್ನು ರಕ್ಷಿಸಲು ವಿಫಲವಾಗಿದೆ ಎಂದು ಆರೋಪಿಸಿದರು. ವಿಧಾನಸಭಾ ಚುನಾವಣೆಗಳು ಮುಗಿದ ತಕ್ಷಣವೇ ಬೆಲೆ ಏರಿಕೆ ಮಾಡಲಾಗಿದೆ. ಮೇ 1ರಿಂದ ವಾಣಿಜ್ಯ ಸಿಲಿಂಡರ್ ಬೆಲೆ…

Read More

ಆನೆ ದಾಳಿಗೆ ಮೂರು ಮಾವಿನ ಮರ ನಾಶ

ಹನಗೋಡು : ಮೇವನ್ನರಸಿ ರಾತ್ರಿ ಸಮಯದಲ್ಲಿ ರೈತರ ಜಮೀನಿಗೆ ಲಗ್ಗೆಯಿಟ್ಟ ಒಂಟಿ ಸಲಗವೊಂದು ಮೂರು ಮಾವಿನ ಮರಗಳನ್ನ ನಾಶಗೊಳಿಸಿರುವ ಘಟನೆ ಹನಗೋಡು ಹೋಬಳಿಯ ಕೊಳವಿಗೆ ಗ್ರಾಮದಲ್ಲಿ ನಡೆದಿದೆ. ಕೊಳವಿಗೆ ಗ್ರಾಮದ ಶಿವರುದ್ರಪ್ಪ ಎಂಬುವರಿಗೆ ಸೇರಿದ ಮಾವಿನ ಮರಗಳು ಆನೆ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ಇನ್ನೇನು ಫಸಲನ್ನು ಕೂಯ್ಲು ಮಾಡುವ ಸಮಯವಾಗಿದ್ದು, ನಷ್ಟದಿಂದ ರೈತ ಶಿವರುದ್ರಪ್ಪ ರವರು ಪರಿಹಾರಕ್ಕಾಗಿ ಅರಣ್ಯ ಇಲಾಖೆಯವರನ್ನು ಮನವಿ ಮಾಡಿದ್ದಾರೆ.

Read More
error: Content is protected !!