ಕಾರ್ಮಿಕರೇ ದೇಶದ ಅಭಿವೃದ್ಧಿಯ ಶಿಲ್ಪಿಗಳು: ಸಿದ್ದರಾಮಯ್ಯ
ಬೆಂಗಳೂರು, ಮೇ 2: ಕಾರ್ಮಿಕರು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯ ಶಿಲ್ಪಿಗಳಾಗಿದ್ದು, ಅವರ ಶ್ರಮವೇ ರಾಷ್ಟ್ರ ನಿರ್ಮಾಣದ ಮೂಲಶಕ್ತಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಕಾಯಕವೇ ಕೈಲಾಸ” ಎಂದು ಬಸವಣ್ಣ ಹೇಳಿರುವುದನ್ನು ಉಲ್ಲೇಖಿಸಿದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ದೊರೆಯಬೇಕು. ಕಾರ್ಮಿಕರು ದೇಶದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅವಿಭಾಜ್ಯ ಅಂಗ ಎಂದು ಹೇಳಿದರು. ದೇಶದಲ್ಲಿ 75 ಶೇಕಡಕ್ಕೂ…
