ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಬಿ.ಕೆ. ಹರಿಪ್ರಸಾದ್ ಭೇಟಿ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸಂತೋಷ್ ಕುಮಾರ್ ಶೆಟ್ಟಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಶೆಟ್ಟಿ ಅವರು ಬಿ.ಕೆ. ಹರಿಪ್ರಸಾದ್ ಅವರಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು.ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾಗಿ ಸಂತೋಷ್ ಕುಮಾರ್ ಶೆಟ್ಟಿ ಅವರು ಶುಭಾಶಯ ಹಾಗೂ ಗೌರವ ಸಲ್ಲಿಸಿದರು.

Read More

ಮಂಜೇಶ್ವರ: ವಾಮಂಜೂರು ಚೆಕ್‌ಪೋಸ್ಟ್ ಬಳಿ ಭೀಕರ ಸರಣಿ ಅಪಘಾತ — ಒಬ್ಬನ ದಾರುಣ ಸಾವು ಮತ್ತೊಬ್ಬ ಗಂಭೀರ

ಮಂಜೇಶ್ವರ: ವಾಮಂಜೂರು ಅಬಕಾರಿ ಚೆಕ್‌ಪೋಸ್ಟ್ ಸಮೀಪ ಬಾನುವಾರ ಸಂಜೆ ಸಂಭವಿಸಿದ ವಾಹನ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ ಜೊತೆಗಿದ್ದವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾನೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಪೈವಳಿಕೆ ಅಗರ್ತಿ ಮೂಲೆ ನಿವಾಸಿ ಕಿರಣ್ (34) ಹಾಗೂ ಕೋಡಿಬೈಲು ಬಳಂಕುಡೆ ನಿವಾಸಿ ಹರೀಶ್ (40), ಎಂಬಿವರು ಗಾಯಗೊಂಡಿದ್ದು ಇವರನ್ನು ಮಂಗಳೂರಿನ ವೆನ್ಹಾಕ್ ಆಸತ್ರೆಯಲ್ಲಿ ದಾಖಲಿಸಲಾಗಿದೆ.ಆದರೆ ಇದೀಗ ಚಿಕಿತ್ಸೆಯಲ್ಲಿದ್ದ ಕಿರಣ್ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಹರೀಶ್ ಹಾಗೂ ಕಿರಣ್ ಸಂಚರಿಸುತ್ತಿದ್ದ ಬೈಕ್ ಟ್ಯಾಂಕ‌ರ್ ಲಾರಿಗೆ ಢಿಕ್ಕಿ ಹೊಡೆದು ಮಗುಚಿ…

Read More

ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ.2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ನಮೂದಾಗಿರುವುದು ನೋಟಿಸ್‌ಗೆ ಕಾರಣ ಎನ್ನಲಾಗಿದೆ. ಆದರೆ, ಅವರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿ ಸೇರಿದಂತೆ ಎಲ್ಲಾ ದಾಖಲೆಗಳಲ್ಲಿ ‘ಹರೇಕಳ ಹಾಜಬ್ಬ’ ಎಂದೇ ಹೆಸರು ನಮೂದಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಲ್ಲಿರುವ ಹೆಸರು ಹಾಗೂ ಇತರ ದಾಖಲೆಗಳಲ್ಲಿನ ಹೆಸರು ತಾಳೆಯಾಗದ ಹಿನ್ನೆಲೆಯಲ್ಲಿ…

Read More

ಪರಸ್ಪರ ಸಹಕಾರದಿಂದ ಅಭಿವೃದ್ಧಿ ಸಾಧ್ಯ” -ಲೀಲಾವತಿ ಕೆ ನಾಯರ್

ಪರಸ್ಪರ ಸಹಕಾರದ ಮೂಲಕ ಅಭಿವೃದ್ಧಿ ಸಾಧ್ಯವೆಂದು, ಕೇಂದ್ರ ಸರಕಾರ ಜಾರಿಗೊಳಿಸುತ್ತಿರುವ ‘ಸಹಕಾರ್ ಸೆ ಸಮೃದ್ಧಿ’ ಎಂಬಘೋಷಣೆಯೊಂದಿಗೆ ಜೀವನ್ ಜ್ಯೋತಿ ಮಲ್ಟಿ ಸ್ಟೇಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕಾರ್ಯವೆಸಗುತ್ತಿರುವುದು ಶ್ಲಾಘನೀಯ, ಎಂದು ಕಾಸರಗೋಡು ಬಾಲಭವನ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಸ್ಥರಾದ ಶ್ರೀಮತಿ ಲೀಲಾವತಿ ಕೆ ನಾಯರ್ ಅಭಿಪ್ರಾಯಪಟ್ಟರು. ಜೀವನ್ ಜ್ಯೋತಿ ಸೊಸೈಟಿಯ ಕಾಸರಗೋಡು ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಓಣಂ ಹಬ್ಬದ ಸಂಭ್ರಮನ್ನು ದೀಪ ಬೆಳಗಿಸಿ ಅವರು ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಾರ್ಡ್ ಸದಸ್ಯೆ ಶೀಮತಿ ಶಮಿನ ಮುಜೀಬ್…

Read More

ಬರಪೀಡಿತ ತಾಲೂಕುಗಳ ಪರಿಶೀಲನೆಗೆ ಸಿಎಂ ವೈಮಾನಿಕ ಸಮೀಕ್ಷೆ: ಬಿ.ಕೆ. ಹರಿಪ್ರಸಾದ್

ಕರ್ನಾಟಕ ರಾಜ್ಯದ ಬರಪೀಡಿತ ಪ್ರದೇಶಗಳ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಂದಾಯ ಸಚಿವರು ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದು, ಎಲ್ಲೆಡೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ಸಚಿವರು ಅಂತಿಮ ವರದಿಯನ್ನೂ ಸಲ್ಲಿಸಿದ್ದಾರೆ. ಆ ವರದಿಯನ್ನು ಪುಷ್ಠೀಕರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ ಎಂದು ಹೇಳಿದರು.ಈ ವಿಶ್ವ ಗುರು ನೆರೆ ಹಾಗೂ ಬರ ಬಂದಾಗ ಮಹಾರಾಷ್ಟ್ರ,…

Read More

ಮರ್ಣೆಯಲ್ಲಿ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ

ಉಡುಪಿ: ಮರ್ಣೆ ಗ್ರಾಮದ ಕುಕ್ಕಿಪಲ್ಕೆ ಪ್ರದೇಶದಲ್ಲಿ ಸರ್ಕಾರಿ ಸಿರಾಸ್ತಿ ಜಮೀನನ್ನು ಅತಿಕ್ರಮಿಸಿ, ಯಾವುದೇ ಕಾನೂನುಬದ್ಧ ಪರವಾನಿಗೆ ಇಲ್ಲದೆ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಹಾಗೂ ಸ್ಫೋಟಕ ವಸ್ತುಗಳನ್ನು ಬಳಸಿ ಕಲ್ಲು ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಮಣಿಪಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಮರ್ಣೆ ಗ್ರಾಮದ ಸರ್ವೆ ನಂ. 112/2ರ 1.54 ಎಕರೆ ಸರ್ಕಾರಿ ಜಮೀನಿನಲ್ಲಿ ಶ್ರೀಮತಿ ರೋಜಿನಾ ರೋಡ್ರಿಗಸ್ ಹಾಗೂ ಅವರ ಪರವಾಗಿ ಅಧಿಕಾರ ಪತ್ರ ಹೊಂದಿರುವ ರಿಚಾರ್ಡ್ ಪೌಲ್ ಫೆರಾವೋ ಅವರು…

Read More

ಮಂಗಳೂರಿನಲ್ಲಿ ಮಕ್ಕಳ ಕೈಯಲ್ಲಿ ಅರಳಿದ ಮಣ್ಣಿನ ಗಣಪತಿ

ಮಂಗಳೂರು: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು, ಕೆನರಾ ಬ್ಯಾಂಕ್, ನವ ಮಂಗಳೂರು ಬಂದರು, ಮಂಗಳೂರು ಎಜೆ ಆಸ್ಪತ್ರೆ, ಕ್ಯಾಂಪ್ಕೋ, ಸೈಕಲ್ ಅಗರಬತ್ತಿ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಆಫ್ ಮಂಗಳೂರು ನಾರ್ಥ್ ಮತ್ತು ನಾರಿ ಕ್ಲಬ್ ಹಾಗೂ ಸಾರಿ ವಾಕ್ ಅಂಡ್ ರನ್ ಆಶ್ರಯದಲ್ಲಿ ಇಲ್ಲಿನ ರೋಟರಿ ಬಾಲ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಪರಸರ ಸ್ನೇಹಿ ಮಣ್ಣಿನ ಗಣಪತಿ ತಯಾರಿಕಾ ಕಾರ್ಯಾಗಾರವು ನಡೆಯಿತು. ಪರಿಸರ ಕಾಳಜಿಯಿಂದ ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳಿಂದ ಕೂಡಿದ ಗಣಪತಿ…

Read More

ಉದ್ಯಾವರ ಮಾಡ ಕುಂಜತ್ತೂರಿನಲ್ಲಿ ಸುವರ್ಣ ಮಹೋತ್ಸವ: 50ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಂಪನ್ನ

ಉದ್ಯಾವರ ಮಾಡ ಕುಂಜತ್ತೂರಿನ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಆಯೋಜಿಸಲಾದ 50ನೇ ವರ್ಷದ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಸುವರ್ಣ ಮಹೋತ್ಸವ ಸೆಪ್ಟೆಂಬರ್ 4ರಿಂದ 6ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಸೆಪ್ಟೆಂಬರ್ 4ರಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಬ್ರಹ್ಮಶ್ರೀ ಗೋಪಾಲ ಕೃಷ್ಣ ತಂತ್ರಿ ಬಡಾಜೆ ಬೂಡು ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ಮಂಜಪ್ಪ ರೈ ತಾಲೆವು, ಸುರೇಶ ಶೆಟ್ಟಿ ಪರೆಂಕಿಲ, ಕುಂಜಣ್ಣ…

Read More

ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನ – ಮಾಸಿಕ ಸ್ವಚ್ಛತಾ ಶ್ರಮದಾನ

ರಾಮಕೃಷ್ಣ ಮಿಷನ್ – ಸ್ವಚ್ಛ ಮಂಗಳೂರು ಅಭಿಯಾನದ ಸೆಪ್ಟೆಂಬರ್ ತಿಂಗಳ ಮಾಸಿಕ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮಕ್ಕೆ ಕದ್ರಿ ಮಲ್ಲಿಕಟ್ಟೆಯ ಕೇಂದ್ರ ಗ್ರಂಥಾಲಯ ಉದ್ಯಾನವನದಲ್ಲಿ ಎಂ.ಆರ್.ಪಿ.ಎಲ್–ಒಎನ್‌ಜಿಸಿ ಸಂಸ್ಥೆಯ ಜನರಲ್ ಮ್ಯಾನೇಜರ್ ಶ್ರೀ ಮಂದಾರ್ ಕಾಲೆ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಶಿಕಲಾ ಅವರು ಚಾಲನೆ ನೀಡಿದರು. ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಎಜುಕೇಶನ್‌ನ ಪ್ರಾಂಶುಪಾಲರಾದ ಡಾ. ಜ್ಞಾನೇಶ್ವರ ಪೈ ಮಾರೂರ್, ಭಾರತೀಯ ಸೇನೆಯ ನಿವೃತ್ತ ಯೋಧರಾದ ಶ್ರೀ ಗೋಪಿನಾಥ ರಾವ್, ಶ್ರೀ ಸತ್ಯನಾರಾಯಣ ಕೆ.ವಿ….

Read More

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್‌

ಮಂಗಳೂರು, ಸೆಪ್ಟೆಂಬರ್‌ 7 : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದ್ದು, ನದಿ ಪ್ರವಾಸೋದ್ಯಮ, ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಪ್ರವಾಸೋದ್ಯಮ, ವಾಟರ್‌ ಸ್ಪೋರ್ಟ್ಸ್‌ ಹಾಗೂ ಸ್ಥಳೀಯ ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ಪರಸ್ಪರ ಜೋಡಿಸುವ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್‌ ತಿಳಿಸಿದರು . ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ…

Read More
error: Content is protected !!