ಪಂಚ ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸಿದೆ: ಪ್ರಸಾದ್ ರಾಜ್ ಕಾಂಚನ್
ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ…
