ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಂದಿ ನೀತಿ: ಜೆಡಿಎಸ್ ಆರೋಪ
ಮಂಗಳೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಬ್ಬಂದಿ ನೀತಿ ಅನುಸರಿಸುತ್ತಿವೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಹಕ್ಕು ನೀಡುವ ವಿಚಾರದಲ್ಲಿಯೇ ಕಾಂಗ್ರೆಸ್ ರಾಜಕೀಯ ಮಾಡುತ್ತಿದ್ದು, ಅದರ ‘ಮಹಿಳಾ ವಿರೋಧಿ’ ಧೋರಣೆ ಬಹಿರಂಗವಾಗಿದೆ ಎಂದು ಆರೋಪಿಸಿದರು. ದಶಕಗಳ ಹಿಂದೆಯೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ದೂರದೃಷ್ಟಿಗೆ ಕಾಂಗ್ರೆಸ್…
