ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026: ಏಪ್ರಿಲ್ 28–29ರಂದು ಕಾರ್ಯಕ್ರಮ
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ (NICO) ವತಿಯಿಂದ ಏಪ್ರಿಲ್ 28 ಮತ್ತು 29ರಂದು ಎರಡು ದಿನಗಳ ಅಂತರರಾಷ್ಟ್ರೀಯ ಮಾಧ್ಯಮ ಸಮಾವೇಶ–2026 ಕಾರ್ಯಕ್ರಮವು ಪನೀರ್ ಕ್ಯಾಂಪಸ್‌ನಲ್ಲಿರುವ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಮೌಲ್ಯಾ ಬಾಲಾಡಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಏಪ್ರಿಲ್ 29ರಂದು ನಡೆಯಲಿರುವ ಮಾಧ್ಯಮ ಕಾರ್ಯಾಗಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗಾಗಿ ವಿಶೇಷವಾಗಿ ಆಯೋಜಿಸಲಾಗಿದೆ ಎಂದರು. ಡಿಜಿಟಲ್ ಯುಗದ ಸವಾಲುಗಳಾದ ‘ಡೀಪ್ ಫೇಕ್’…
