ಮಂಗಲ್ಪಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಹಾಗೂ 29ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ
ಡಾ. ಬಿ ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ ಮಂಗಲ್ಪಾಡಿ ಇದರ 29ನೇ ವಾರ್ಷಿಕೋತ್ಸವ ಮತ್ತು ಸಂವಿದಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಇತ್ತೀಚಿಗೆ ಮಂಗಲ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಶ್ರೀ ವಸಂತಕುಮಾರ್ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಇದರ ಸ್ಥಾಪಕ ಸದಸ್ಯರಾದ ಶ್ರೀ ನಾರಾಯಣ ಬಾರಡ್ಕ ಇವರು ಅಂಬೇಡ್ಕರ್ ತತ್ವ ಮತ್ತು ವಿಚಾರಗಳ ಬಗ್ಗೆ ಮಾತನಾಡಿದರು….
