ವಂದೇ ಭಾರತ್‌ಗೆ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ: ರೈಲ್ವೆ ಮಂಡಳಿಗೆ ಡಾ. ಅರುಣಾ ಶ್ಯಾಮ್ ಮನವಿ
ಪುತ್ತೂರು: ಬೆಂಗಳೂರು–ಮಂಗಳೂರು ನಡುವೆ ಸಂಚರಿಸಲಿರುವ 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ಸಂಚಾರದ ವೇಳೆ ಹಾಗೂ ಬಳಿಕ ವಾಣಿಜ್ಯ ಸಂಚಾರ ಆರಂಭವಾದಾಗ ನಿಯಮಿತ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲರಾದ ಡಾ. ಅರುಣಾ ಶ್ಯಾಮ್. ಎಂ. ಅವರು ರೈಲ್ವೆ ಮಂಡಳಿಗೆ ಮನವಿ ಮಾಡಿದ್ದಾರೆ. ರೈಲ್ವೆ ಮಂಡಳಿ ನಿರ್ದೇಶನದಂತೆ ಯಶವಂತಪುರ–ಮಂಗಳೂರು ಸೆಂಟ್ರಲ್ ನಡುವೆ ಸೆ.5ರಂದು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ ನಿಗದಿಯಾಗಿದೆ. ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ…
