ಮಂಗಳೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ಹೊಸ ಆಯುಕ್ತರಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈವರೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಹುಲ್ ರತ್ನಂ ಪಾಂಡೆ ಅವರು ತಕ್ಷಣದಿಂದಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ…
