ಬಜಪೆ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಅಂತರ್ ರಾಜ್ಯ ಆರೋಪಿಯ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮೂಲದ ಅಂತರ್ ರಾಜ್ಯ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಿಂಡಿಗುಲ್ ಜಿಲ್ಲೆಯ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25) ಎಂದು ಗುರುತಿಸಲಾಗಿದೆ. ಕಳೆದ ಮಾರ್ಚ್ 03, 2026 ರಂದು ಕೆಂಜಾರು ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಆರೋಪಿ, ದೇವಸ್ಥಾನದಲ್ಲಿದ್ದ ಮೂರು ಕಾಣಿಕೆ ಹುಂಡಿಗಳನ್ನು ಒಡೆದು ಸುಮಾರು 25,000 ರೂಪಾಯಿ ನಗದನ್ನು…
