ಉದ್ಯಾವರದಲ್ಲಿ ಜೈ ವೀರ ಮಾರುತಿ ವ್ಯಾಯಾಮಶಾಲೆಯ 31ನೇ ಭಜನೋತ್ಸವ

ಉದ್ಯಾವರ: ಶ್ರೀ ಅರಸು ಮಂಜಿಷ್ಣಾರ್ ಕೃಪಾ ಜೈ ವೀರ ಮಾರುತಿ ವ್ಯಾಯಾಮಶಾಲೆಯ ವತಿಯಿಂದ 31ನೇ ವಾರ್ಷಿಕ ಭಜನೋತ್ಸವವು ಮಾರ್ಚ್ 28 ಮತ್ತು 29ರಂದು ಭಕ್ತಿಭಾವದಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.ಮಾರ್ಚ್ 28ರಂದು ಸಂಜೆ 6:40ಕ್ಕೆ ಶ್ರೀ ಶಂಭು ನಂಬೂದಿರಿ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಭಕ್ತಿಗೀತೆಗಳೊಂದಿಗೆ ಭಜನೆ ನಡೆಯಲಿದೆ. ಮಾರ್ಚ್ 29ರಂದು ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರಿಗೆ ಪ್ರಸಾದ…

Read More

ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ. ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ….

Read More

ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹ: ಕಾಸರಗೋಡಿನಲ್ಲಿ ದುಂಡುಮೇಜಿನ ಪರಿಷತ್ತು

ಕಾಸರಗೋಡು: ಮಲಯಾಳಂ ಭಾಷಾ ಮಸೂದೆ–2025ರಲ್ಲಿ ಕನ್ನಡ ಭಾಷಾ ಅಲ್ಪಸಂಖ್ಯಾತರನ್ನು ಒಳಗೊಳ್ಳುವಂತೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ದುಂಡುಮೇಜಿನ ಪರಿಷತ್ತು ನಡೆಯಲಿದೆ. ಕೇರಳ ಸರ್ಕಾರದ ಮಲಯಾಳಂ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕನ್ನಡಿಗರ ಹಕ್ಕುಗಳನ್ನು ಸಂರಕ್ಷಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಕಾಸರಗೋಡು ಭಾಗದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳು ಒಗ್ಗೂಡಿ ಮನವಿಯನ್ನು ಸಿದ್ಧಪಡಿಸಿ, ಸಹಿ ಸಂಗ್ರಹ ಅಭಿಯಾನ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಕೇರಳ ವಿಧಾನಸಭಾ ಚುನಾವಣೆಯ ಬಳಿಕ ಆಯ್ಕೆಯಾಗುವ…

Read More

ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ: ಮಾರ್ಚ್ 28ರಂದು ಮಕ್ಕಳ ಕಲರವ

ಕಾಸರಗೋಡು: ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುತ್ತಾ ಬಂದಿರುವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಮಾರ್ಚ್ 28ರಂದು ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯೋತ್ಸವ ಜರಗಲಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ನೇತೃತ್ವದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗದಲ್ಲಿ ಈ ಉತ್ಸವ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸಚಿನ್…

Read More

ಮುಳಿಯ ಗೋಲ್ಡ್ & ಡೈಮಂಡ್ಸ್‌ನ “ಡೈಮಂಡ್ ಫೆಸ್ಟ್” ಮಾರ್ಚ್ 27ರಿಂದ ಆರಂಭ

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸಿದೆ. ‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ₹50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಖಚಿತ ಉಡುಗೊರೆ ನೀಡಲಾಗುತ್ತಿದೆ. ಜೊತೆಗೆ ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಗ್ರಾಹಕರಿಗೆ ಲಭ್ಯವಿದೆ. ವಿವಿಧ ವಿನ್ಯಾಸಗಳ ವಜ್ರಾಭರಣಗಳನ್ನು ಪ್ರದರ್ಶನ ಹಾಗೂ…

Read More

ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ; ಹೋಟೆಲ್ ಕಾರ್ಮಿಕ ಸಾವು

​ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಹೊಸಂಗಡಿ ಎಕ್ಸಿಟ್ ಪಾಯಿಂಟ್ ಬಳಿ ಗುರುವಾರ ಮಧ್ಯಾಹ್ನ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಯಾಬಜಾರ್‌ನ ಯು.ಕೆ. ಫ್ಲಾಟ್ ನಿವಾಸಿ ಇಮಾನುಲ್ಲಾ (19) ಸಾವನ್ನಪ್ಪಿದ ದುರ್ದೈವಿ.ಮೃತ ಯುವಕ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವನಾಗಿದ್ದು, ಸ್ಥಳೀಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಹೊಸಂಗಡಿ ಜಂಕ್ಷನ್ ಬಳಿ ಚಲಿಸುತ್ತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಮಾನುಲ್ಲಾ ಅವರನ್ನು ತಕ್ಷಣ…

Read More

​ಜಿಲ್ಲಾ ಮತದಾರರ ಪಟ್ಟಿ ಪ್ರಕಟ: ಮಂಜೇಶ್ವರದಲ್ಲಿ 2.30 ಲಕ್ಷ ಮತದಾರರು

​ಮಂಜೇಶ್ವರ: ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಧಿಕೃತ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಮಂಜೇಶ್ವರ ಕ್ಷೇತ್ರವು ಅತಿ ಹೆಚ್ಚು ಅಂದರೆ 2,30,113 ಮತದಾರರನ್ನು ಒಳಗೊಂಡಿದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರ ಪ್ರಾಬಲ್ಯ ಎದ್ದು ಕಾಣುತ್ತಿದೆ. ​ ಉದುಮ ಕ್ಷೇತ್ರದಲ್ಲಿ ಗರಿಷ್ಠ 2,58,512 ಮತದಾರರಿದ್ದು, ಇಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೊಸದುರ್ಗದಲ್ಲಿ 2,23,980 ಹಾಗೂ ಕಾಸರಗೋಡು ಕ್ಷೇತ್ರದಲ್ಲಿ 2,10,923 ಮತದಾರರಿದ್ದಾರೆ. ತೃಕರಿಪುರದಲ್ಲಿ ಕನಿಷ್ಠ 2,10,090 ಮತದಾರರು ನೋಂದಾಯಿಸಿಕೊಂಡಿದ್ದಾರೆ.​ವಿಶೇಷವೆಂದರೆ ಉದುಮ, ಹೊಸದುರ್ಗ ಮತ್ತು ತೃಕರಿಪುರ ಕ್ಷೇತ್ರಗಳಲ್ಲಿ ಒಟ್ಟು 12 ಮಂಗಳಮುಖಿ ಮತದಾರರು…

Read More

ಶಾಹುಲ್ ಹಮೀದ್ ತಂಗಳ್ ಸ್ಮರಣಾರ್ಥ ಪ್ರಾರ್ಥನಾ ಸಭೆ

ದುಬೈ ಮಲಬಾರ್ ಕಲಾಸಾಂಸ್ಕೃತಿಕ ವೇದಿಕೆ ವತಿಯಿಂದ ಕಾಸರಗೋಡು ಮೂಲದ ಖ್ಯಾತ ಸಮಾಜಸೇವಕ ಶಾಹುಲ್ ಹಮೀದ್ ತಂಗಳ್ ಅವರ ಸ್ಮರಣಾರ್ಥ ಪ್ರಾರ್ಥನಾ ಸಭೆಯನ್ನು ಕುಂಬಳೆ ರಾಯಲ್ ಖುಬಾ ರೆಸ್ಟೋರಂಟ್‌ನಲ್ಲಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾಜಿ ಶಾಸಕ ಎಂ.ಸಿ. ಕಮರುದ್ದೀನ್ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಅವರು, ಕುಂಬಳ ಸಾರ್ವಜನಿಕ ಕ್ಷೇತ್ರದಲ್ಲಿ ಶಾಹುಲ್ ಹಮೀದ್ ತಂಗಳ್ ನಿಸ್ವಾರ್ಥ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಅವರ ಅಕಾಲಿಕ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಪ್ರಾರ್ಥನಾ ಸಭೆಗೆ ಸಯ್ಯಿದ್ ಯಾಹಿಯ ತಂಗಳ್…

Read More

ಕಾಸರಗೋಡಿನ ಕನ್ನಡ ಭವನ ಗದಗ ಘಟಕ ಪದಗ್ರಹಣ ಕಾರ್ಯಕ್ರಮ ಯಶಸ್ವಿ

ಕಾಸರಗೋಡಿನ ಕನ್ನಡ ಭವನ, ಗ್ರಂಥಾಲಯ (ರಿ) ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶಿರಹಟ್ಟಿಯ ಫಕೀರೇಶ್ವರ ನಗರದ ಎಚ್.ಎಂ. ದೇವಗಿರಿ ಅವರ ನಿವಾಸದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಸಂಗಮೇಶ ತಮ್ಮನಗೌಡ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೊಸ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು. ಡಾ. ಸಂಗಮೇಶ ತಮ್ಮನಗೌಡ್ರ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಗೌರವಾಧ್ಯಕ್ಷರಾಗಿ ಪೂಜ್ಯಶ್ರೀ ಶಾಂತಲಿಂಗ ಮಹಾಸ್ವಾಮೀಜಿಗಳು ಹಾಗೂ ಪೂಜ್ಯಶ್ರೀ ರಮೇಶ ಮಹಾಸ್ವಾಮಿಗಳು ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ರತ್ನಾ ಗಿರೋಸಾ ಬದಿ, ಕಾರ್ಯದರ್ಶಿಯಾಗಿ ಸುಭಾಷ್…

Read More

ಮಂಜೇಶ್ವರ ಕ್ಷೇತ್ರದಲ್ಲಿ ಸುರೇಂದ್ರನ್ ಪರ ರಾಜೇಶ್ ನಾಯ್ಕ್ ಮತಯಾಚನೆ

ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಸುರೇಂದ್ರನ್ ಅವರ ಪರವಾಗಿ ಮತ ನೀಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾ.26 ರಂದು ಗುರುವಾರ ಬೆಳಿಗ್ಗೆಯಿಂದ ವರ್ಕಾಡಿ ಗ್ರಾ.ಪಂ‌.ವ್ಯಾಪ್ತಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು.ಬಂಟ್ವಾಳ ವಿಧಾನಸಭಾ ಕ್ಷೇತ್ರದ ಹತ್ತಿರದ ಕ್ಷೇತ್ರವಾಗಿರುವ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ವರ್ಕಾಡಿ ಗ್ರಾಮದಲ್ಲಿರುವ ವರ್ಕಾಡಿ ಬಿಜೆಪಿ ಕಚೇರಿಗೆ ಬೇಟಿ ನೀಡಿದ ಅವರು ಕಾರ್ಯಕರ್ತರ ಜೊತೆ ಚರ್ಚಿಸಿದರು. ಬಳಿಕ ಕಾರ್ಯಕರ್ತರ ಜೊತೆಗೆ ತೆರಳಿದ ಅವರು ಮತದಾರರ ಮನವೊಲಿಸಿ ಮತನೀಡುವಂತೆ ಮನವಿ ಮಾಡಿದರು. ಬಿಜೆಪಿ…

Read More
error: Content is protected !!