ಏಣಿಯಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು: ಹೆಬ್ರಿಯಲ್ಲಿ ದುರ್ಘಟನೆ
ಉಡುಪಿ: ಹೆಬ್ರಿ ತಾಲೂಕಿನ ಹುತುರ್ಕೆ ಪ್ರದೇಶದಲ್ಲಿ ಏಣಿಯಿಂದ ಆಯತಪ್ಪಿ ಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗೆ ಪರೀಕ್ಷೆ ಮುಗಿಸಿದ್ದನು. ರಜೆಯ ಸಮಯವನ್ನು ಸದುಪಯೋಗಪಡಿಸಿಕೊಂಡು ತನ್ನ ವಿದ್ಯಾಭ್ಯಾಸಕ್ಕೂ ಹಾಗೂ ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹುತುರ್ಕೆ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾಗ ಏಣಿಯಿಂದ ಆಯತಪ್ಪಿ ಬಿದ್ದು ಗಂಭೀರವಾಗಿ…
