ತಲಪಾಡಿ ಷಟ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆಮಾರಿ ದನಗಳ ಅಡ್ಡಾದಿಡ್ಡಿ ಅಲೆದಾಟ,ವಾಹನ ಸವಾರರು ಅಪಾಯದ ಭೀತಿಯಲ್ಲಿ
ಮಂಜೇಶ್ವರ : ನೂತನವಾಗಿ ನಿರ್ಮಾಣಗೊಂಡ ತಲಪಾಡಿ ಷಟ್ಪಥ ರಾಷ್ಟ್ರೀಯ ಹೆದ್ದಾರಿ ಸಾರ್ವಜನಿಕರ ಸುಲಭ ಹಾಗೂ ವೇಗದ ಸಾರಿಗೆಗಾಗಿ ನಿರ್ಮಿತವಾಗಿದ್ದರೂ, ಇತ್ತೀಚಿನ ರಸ್ತೆಯ ಮೇಲೆ ಅಲೆಮಾರಿ ದನಗಳ ಅಡ್ಡಾದಿಡ್ಡಿ ಅಲೆದಾಟದಿಂದಾಗಿ ವಾಹನ ಸವಾರರು ಅಪಾಯದ ಭೀತಿಯನ್ನು ಎದುರಿಸುವಂತಾಗಿದೆ. ಪ್ರತಿ ದಿನವೂ ಹಲವು ಸಮೀಪ ಪ್ರದೇಶದಿಂದ ಹತ್ತಾರು ದನಗಳು ರಸ್ತೆಗೆ ಪ್ರವೇಶಿಸುತ್ತಿದ್ದು, ವಿಶೇಷವಾಗಿ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಈ ಘಟನೆಗಳು ಹೆಚ್ಚಾಗಿ ಕಾಣಿಸುತ್ತಿವೆ. ದನ ಸಾಕುವವರು ಸೂಕ್ತವಾದ ಸ್ಥಳಗಳಲ್ಲಿ ದನಗಳನ್ನು ಮೇಯಲು ಬಿಡದೆ ಬೇಕಾಬಿಟ್ಟಿಯಾಗಿ ಬಿಡುತ್ತಿರುವ ಹಿನ್ನೆಲೆಯಲ್ಲಿಈ ದನಗಳು…