ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ
ಕಾಸರಗೋಡು: ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೆಸರಾದ ಕನ್ನಡ ಗ್ರಾಮದಲ್ಲಿ 2026ರ ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಗ್ರಾಮ ಸಹಯೋಗದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಗೋ-ಕುಟೀರದಲ್ಲಿ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ…
