ಹೆದ್ದಾರಿಯಲ್ಲಿ ನಿಂತ ಲಾರಿಗೆ ಸ್ಕೂಟರ್ ಡಿಕ್ಕಿ; ಯುವಕ ಸಾವು

ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾರೆ.ಮೃತರನ್ನು ಮಂಜುನಾಥ ಬೈಲಪ್ಪ ಮುರಗಾಲಿ (21) ಎಂದು ಗುರುತಿಸಲಾಗಿದೆ. ಇವರು ಕಾರ್ಕಳ ಕಡೆಯಿಂದ ಸುರತ್ಕಲ್ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ರಾತ್ರಿ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಪಾರ್ಕಿಂಗ್ ಲೈಟ್ ಅಥವಾ ಇಂಡಿಕೇಟರ್…

Read More

ಉಡುಪಿಯಲ್ಲಿ ಇಂದು ಕೃಷ್ಣಜನ್ಮಾಷ್ಟಮಿ ಸಂಭ್ರಮ

ಉಡುಪಿ: ಶ್ರೀಕೃಷ್ಣನ ಜನ್ಮದಿನವಾದ ಕೃಷ್ಣಜನ್ಮಾಷ್ಟಮಿಯ ಸಂಭ್ರಮಕ್ಕೆ ಉಡುಪಿ ಸಜ್ಜಾಗಿದ್ದು, ಇಂದು ಹಾಗೂ ನಾಳೆ ಮಠದಲ್ಲಿ ಮತ್ತು ನಗರದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಈ ಹಿನ್ನೆಲೆಯಲ್ಲಿ ಪರ್ಯಾಯ ಪೀಠಾಧಿಪತಿ ಶ್ರೀ ಶೀರೂರು ವೇದವರ್ಧನ ತೀರ್ಥ ಶ್ರೀಪಾದರು ಭಕ್ತರಿಗೆ ಸಂದೇಶ ನೀಡಿದ್ದು, ಧರ್ಮದ ಸ್ಥಾಪನೆ ಹಾಗೂ ಅಧರ್ಮದ ಸಂಹಾರಕ್ಕಾಗಿ ಶ್ರೀಕೃಷ್ಣ ಅವತಾರವೆತ್ತಿದನು. ಶ್ರೀಕೃಷ್ಣನು ಮಧ್ಯರಾತ್ರಿ ಜನಿಸಿದನೆಂಬುದಕ್ಕೂ ವಿಶೇಷ ಅರ್ಥವಿದೆ. ಮಧ್ಯರಾತ್ರಿಯ ವೇಳೆ ರಾಕ್ಷಸರ ಸಂಚಾರ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಧರ್ಮವನ್ನು ಸಂಹರಿಸಿ ಧರ್ಮವನ್ನು ಸ್ಥಾಪಿಸುವ ಉದ್ದೇಶದಿಂದ ಶ್ರೀಕೃಷ್ಣ ಅವತರಿಸಿದನು…

Read More

ವಿಟ್ಲಪಿಂಡಿ, ಕೃಷ್ಣಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್

3 ಡ್ರೋನ್ ತಂಡ, 45 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾ; ಏಳು ಕಡೆ ವಾಹನ ನಿಲುಗಡೆ ವ್ಯವಸ್ಥೆ ಉಡುಪಿ: ಉಡುಪಿ ನಗರದ ಪ್ರಸಿದ್ಧ ವಿಟ್ಲಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.ಮಹೋತ್ಸವದ ಬಂದೋಬಸ್ತ್‌ಗಾಗಿ ಒಬ್ಬರು ಪೊಲೀಸ್ ಅಧೀಕ್ಷಕರು, ಒಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಇಬ್ಬರು ಡಿವೈಎಸ್‌ಪಿಗಳು, ಆರು ಪೊಲೀಸ್ ಇನ್‌ಸ್ಪೆಕ್ಟರ್‌ಗಳು, 25 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು…

Read More

ಪಣಂಬೂರಿನಲ್ಲಿ ಚರಂಡಿಗೆ ನುಗ್ಗಿ ಪಲ್ಟಿಯಾದ ಎಕ್ಸ್‌ಪ್ರೆಸ್ ಬಸ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಪಣಂಬೂರು: ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ನುಗ್ಗಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಪಘಾತದಲ್ಲಿ ಬೆಳ್ಳಣ್ ನಿವಾಸಿ ಆದಿತ್ಯ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಂಗಳೂರು ಉತ್ತರ ಸಂಚಾರ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ಪಲ್ಟಿಯಾಗಿದ್ದ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದು…

Read More

ಅಶೋಕ್ ರೈ ವಿರುದ್ಧ ಹಕೀಂ ಕೂರ್ನಡ್ಕ ಆಕ್ರೋಶ; ಟಿಕೆಟ್ ನೀಡಿದರೆ ಚುನಾವಣೆಗೆ ಸ್ಪರ್ಧಿಸುವ ಘೋಷಣೆ

ಮಂಗಳೂರು:ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿದರೆ ತಾವು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತೂರಿನ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮನ್ನು ಕಾಂಗ್ರೆಸ್ ಕಾರ್ಯಕರ್ತನಲ್ಲ ಎಂದು ಆರೋಪಿಸಿ ಅಶೋಕ್ ರೈ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಮುಖಂಡ ಜಲೀಲ್ ಕರೋಪಾಡಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಅಶೋಕ್ ರೈ…

Read More

ಮೊಬೈಲ್ ದಾಸರಾಗದೆ ಜ್ಞಾನಾರ್ಜನೆಗೆ ಒತ್ತು ನೀಡಿ: ಸ್ವಾಮಿ ವಿವಿಕ್ತಾನಂದ ಸರಸ್ವತಿ

ಬದಿಯಡ್ಕ: ಚಿನ್ಮಯ ವಿದ್ಯಾಲಯ ಬದಿಯಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವು ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಜರಗಿತು. ಶ್ರೀಕೃಷ್ಣ ಹಾಗೂ ರಾಧೆಯರ ಆಕರ್ಷಕ ಮೆರವಣಿಗೆಯನ್ನು ಮುತ್ತುಕೊಡೆ, ವಾದ್ಯಮೇಳ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಶಾಲಾ ಆವರಣಕ್ಕೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿನ್ಮಯ ಮಿಷನ್ ಮುಖ್ಯಸ್ಥರಾದ ಸ್ವಾಮಿ ವಿವಿಕ್ತಾನಂದ ಸರಸ್ವತಿ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳು ಮೊಬೈಲ್ ಫೋನ್‌ಗಳ ದಾಸರಾಗದೆ, ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಅವರು ಕರೆ ನೀಡಿದರು. ಜ್ಞಾನಾರ್ಜನೆ, ಉತ್ತಮ ಸಂಸ್ಕಾರ…

Read More

ರಾಜೇಶ್ ನಾಯಕ್ ಕರೋಪಾಡಿ ಗಡಿಪಾರು ಆದೇಶ ಖಂಡನೀಯ: ಬಂಟ್ವಾಳ ಬಿಜೆಪಿ

ಹಿಂದೂ ಸಂಘಟನೆಯ ಮುಖಂಡ ರಾಜೇಶ್ ನಾಯಕ್ ಕರೋಪಾಡಿ ಅವರನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿರುವ ಆದೇಶ ಖಂಡನೀಯ. ಪೊಲೀಸ್ ಇಲಾಖೆಯ ಈ ಏಕಪಕ್ಷೀಯ ಕ್ರಮದ ವಿರುದ್ಧ ಬಂಟ್ವಾಳ ಬಿಜೆಪಿ ಮಂಡಲ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜೇಶ್ ನಾಯಕ್ ಕರೋಪಾಡಿ ಅವರು ಕರೋಪಾಡಿ ಗಡಿಭಾಗದಲ್ಲಿ ಹಲವು ವರ್ಷಗಳಿಂದ ಸಂಘಟನಾತ್ಮಕ ಹಾಗೂ ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಬಡವರು ಹಾಗೂ ದೀನದಲಿತರ ಪರವಾಗಿ ವಿವಿಧ ರೀತಿಯ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ವ್ಯಕ್ತಿಯ ವಿರುದ್ಧ ಉದ್ದೇಶಪೂರ್ವಕವಾಗಿ ಗಡಿಪಾರು ಕ್ರಮ ಕೈಗೊಳ್ಳಲಾಗಿದ್ದು, ಇದರ…

Read More

ಕಾಸರಗೋಡು:-ಶಿವದುರ್ಗಾ ವೇದಿಕೆಯಲ್ಲಿ ಹನಿಗವನ ಉತ್ಸವ

ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇವರ 245ನೇ ಕಾರ್ಯಕ್ರಮವಾಗಿ 31 ಆಗಸ್ಟ್ 2026 ಸೋಮವಾರ ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನದ ಶಿವದುರ್ಗಾ ವೇದಿಕೆ ಚೂರಿಪ್ಪಳ್ಳ ನೆಲ್ಲಿಕಟ್ಟೆ ಇಲ್ಲಿ “ಹನಿಗವನ ಉತ್ಸವ” ಹಾಗೂ ಸಾಹಿತ್ಯ ಗಾನ ನೃತ್ಯ ವೈಭವ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಡಾ. ವೆಂಕಟಗಿರೀಶ್ ಹನಿಗವನಗಳು ಪ್ರಸ್ತುತ ದಿನಗಳಲ್ಲಿ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮಹತ್ತರ ಸಾಹಿತ್ಯ ಪ್ರಾಕಾರಗಳು…

Read More

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

ಮಂಗಳೂರು: ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಗುರುತಿಸಿ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಅವರಿಗೆ  ಪ್ರತಿಷ್ಠಿತ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಬೆಂಗಳೂರಿನಲ್ಲಿ ಗೌರವಿಸಲಾಯಿತು. ಶ್ರೀ ಜ್ಞಾನ ಮಂದಾರ ಎಜುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.), ಬೆಂಗಳೂರು ಇದರ ರಜತ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಬನಶಂಕರಿಯ ಜೆ.ಎಸ್.ಎಸ್. ಪಬ್ಲಿಕ್ ಶಾಲೆಯ ಫಣಲಿಂಗ  ಶಿವಯೋಗಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ  ಮಾಡಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು  ಆರ್.ಎನ್.ಎಸ್. ಕಾಲೇಜಿನ ಪ್ರಾಂಶುಪಾಲ ಪ್ರೊ. ರವಿಶಂಕರ್ ಬಿ.ವಿ. ಅವರು ಎಸ್. ಜಗದೀಶ್ಚಂದ್ರ  ಅಂಚನ್ ಅವರಿಗೆ ಬೆಳ್ಳಿ ಹಾಗೂ ಚಿನ್ನದ ಪದಕದೊಂದಿಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕ್ರೀಡಾ ಕ್ಷೇತ್ರದ ಬೆಳವಣಿಗೆ, ಕ್ರೀಡಾಪಟುಗಳ ಸಾಧನೆ ಹಾಗೂ ಕ್ರೀಡೆಗೆ ಸಂಬಂಧಿಸಿದ ವಿವಿಧ ವಿಚಾರಗಳನ್ನುತಮ್ಮ ಅಂಕಣ ಬರಹಗಳ ಮೂಲಕ ನಿರಂತರವಾಗಿ ದಾಖಲಿಸುತ್ತಿರುವ ಎಸ್. ಜಗದೀಶ್ಚಂದ್ರ ಅಂಚನ್  ಅವರ ಸೇವೆಯನ್ನು ಸಮಾರಂಭದಲ್ಲಿ ಶ್ಲಾಘಿಸಲಾಯಿತು. ಇದೇ ಸಂದರ್ಭದಲ್ಲಿ ಬೆಂಗಳೂರು ಆರ್.ಎನ್.ಎಸ್. ಕಾಲೇಜು ಹಾಗೂ ಮುಡಿಪುವಿನ ಜ್ಞಾನಶ್ರೀ ವಿದ್ಯಾಲಯದ ವತಿಯಿಂದಲೂ ಎಸ್. ಜಗದೀಶ್ಚಂದ್ರ ಅಂಚನ್  ಅವರಿಗೆ ವಿಶೇಷ ಗೌರವ ಸಲ್ಲಿಸಲಾಯಿತು. ಬಸವ ವೇದಿಕೆ (ರಿ.), ಬೆಂಗಳೂರು ಹಾಗೂ ಕನ್ನಡ  ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಬೆಂಗಳೂರು ಶ್ರೀ ವಚನ ಜ್ಯೋತಿ  ಸಹಕಾರಿ ಬ್ಯಾಂಕ್ ಅಧ್ಯಕ್ಷ ದಾನಪ್ರಕಾಶ ಎನ್. ತಿಮ್ಮಪ್ಪ, ಬೆಂಗಳೂರು ಎಂ.ಎನ್.ಆರ್. ಕಾಲೇಜಿನ ಪ್ರಾಂಶುಪಾಲ ಪ್ರೊ. ಮೋಹನ್ ಕುಮಾರ್ ಆರ್., ಸಾರ್ವಜನಿಕ  ಶಿಕ್ಷಣ ಇಲಾಖೆಯ ಅಧಿಕಾರಿ ಚಂದ್ರಶೇಖರ, ಜ್ಞಾನ  ಮಂದಾರ ಟ್ರಸ್ಟ್‌ನ ಸಂಸ್ಥಾಪಕ ಸೋಮಶೇಖರ್,  ಅಂತಾರಾಷ್ಟ್ರೀಯ ನೃತ್ಯ ಕಲಾವಿದೆ ಹಾಗೂ ಚಲನಚಿತ್ರ ನಟಿ ಎಂ.ಎಸ್. ಆರತಿ ಸುರೇಶ್, ಪ್ರೊ. ಕಾಂತಪ್ಪ,  ಸಾಹಿತಿ ವಿಜಯಲಕ್ಷ್ಮಿ ಕೌಟಗೆ ಹಾಗೂ ರಂಗ ಸಮಾಜ ಸಾಂಸ್ಕೃತಿಕ ಸಂಸ್ಥೆ, ಬೆಂಗಳೂರು ಇದರ ಕಾರ್ಯದರ್ಶಿ ತಿಲಕ್ ರಾಜ್ ಎಸ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಅಂಚನ್ ಪಡೆದ ಪ್ರಶಸ್ತಿಗಳುಇವರ  ಕ್ರೀಡಾ ಬರವಣಿಗೆಗಾಗಿ 2013ರಲ್ಲಿ ‘ಮೀಡಿಯಾ ಅವಾರ್ಡ್’, 2014ರಲ್ಲಿ ‘ಸಮಾಜ ರತ್ನ ‘ ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ  ;…

Read More

ಎಂಎಸ್‌ಎಫ್‌ನಲ್ಲಿ ಏಕಪಕ್ಷೀಯ ನಿರ್ಧಾರಕ್ಕೆ ವಿರೋಧ; ಐವರು ನಾಯಕರು ರಾಜೀನಾಮೆ

​ಕಾಸರಗೋಡು: ಜಿಲ್ಲಾ ಎಂಎಸ್‌ಎಫ್‌ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಯ ಏಕಪಕ್ಷೀಯ ತೀರ್ಮಾನಗಳನ್ನು ಖಂಡಿಸಿ ಕೋಶಾಧಿಕಾರಿ ಸರ್ಫರಾಸ್ ಬಂದ್ಯೋಡ್ ಸೇರಿದಂತೆ ಐವರು ಪ್ರಮುಖ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಸಂಘಟನೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಉಪಾಧ್ಯಕ್ಷರಾದ ಜಂಶೀರ್, ಮುರ್ಶಿದ್ ಹಾಗೂ ಕಾರ್ಯದರ್ಶಿಗಳಾದ ಬಿಲಾಲ್, ಅನ್ಸಾರ್ ರಾಜೀನಾಮೆ ನೀಡಿದ ಇತರ ನಾಯಕರು.​ರಾಜ್ಯ ಸಮಿತಿಗೆ ಹಿರಿಯ ನಾಯಕ ಸವಾದ್ ಅಂಗಡಿಮೊಗರು ಅವರ ಹೆಸರನ್ನು ಶಿಫಾರಸು ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ, ಅದನ್ನು ಬದಿಗೊತ್ತಿ ಜಿಲ್ಲಾಧ್ಯಕ್ಷ ಸೈಫುದ್ದೀನ್ ಹಾಗೂ ಕಾರ್ಯದರ್ಶಿ ಅನ್ಸಾರ್ ಅವರು ಶಾನಿಫ್…

Read More
error: Content is protected !!