ಜೋಡುಕಲ್ಲಿನಲ್ಲಿ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಾಣ ಆರೋಪ-ಕಾನೂನು ಪ್ರಕಾರ ಹೋರಾಟಕ್ಕೆ ತೀರ್ಮಾನ: ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್.
ಮಂಜೇಶ್ವರ: ಜೋಡುಕಲ್ಲಿನಲ್ಲಿ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಆರೋಪಿಸಿರುವ ವಿಚಾರ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳ ಹಿಂದೆ, ಮಂಜೇಶ್ವರ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದ್ದರು. ಜೋಡುಕಲ್ಲಿನಲ್ಲಿ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ, ಇಲಾಖೆಯ ಅಸಿಸ್ಟೆಂಟ್ ಎಂಜಿನಿಯರ್ ಶೋಭಾ ಅವರನ್ನು ಕಚೇರಿಯೊಳಗೆ ದಿಗ್ಬಂಧನಗೊಳಿಸಿ ಪ್ರತಿಭಟನೆ ನಡೆಸಲಾಗಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ನಿನ್ನೆ…
