ಗುಡ್ಡ ಕುಸಿತದಲ್ಲಿ ಮಕ್ಕಳನ್ನೂ ಕಳೆದುಕೊಂಡ ತಾಯಿ; ನ್ಯಾಯಕ್ಕಾಗಿ ಆಯೋಗದ ಮೊರೆ
ಮಂಗಳೂರು:ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಂ ಭಟ್ ಮತ್ತು ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಇದಕ್ಕಾಗಿ ತಾಯಿ ಜೊತೆ ಖಾಸಗಿ…
