ಸಾಮಾಜಿಕ ಮಾಧ್ಯಮ ಇನ್ಫ್ಲುಯೆನ್ಸರ್ ‘ಚಿನ್ನು ಪಾಪು’ ಆತ್ಮಹತ್ಯೆ
ಮಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ 2 ಲಕ್ಷಕ್ಕೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿದ್ದ ಸಾಮಾಜಿಕ ಮಾಧ್ಯಮದ ಯುವ ಪ್ರಭಾವಿ ‘ಚಿನ್ನು ಪಾಪು’ ಅವರು ಸೋಮವಾರ ಕಾಸರಗೋಡಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ‘ಚಿನ್ನು ಪಾಪು’ ಎಂದು ಪರಿಚಿತರಾಗಿದ್ದ ಅವರನ್ನು ದೇಲಂಪಾಡಿ ಪಂಚಾಯತ್ ನ ಅಧೂರ್ ಮೂಲದ ರೇಷ್ಮಾ (24) ಎಂದು ಗುರುತಿಸಲಾಗಿದೆ. ಕಾಸರಗೋಡು ಪಟ್ಟಣದ ಸಮೀಪದ ಉಳಿಯತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಮಧ್ಯಾಹ್ನ ವೇಳೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು…
