ಬಾಡಿಗೆ ಮನೆಯಲ್ಲಿ ವಾಸ, ಕಳ್ಳತನ ಮಾಡಿ ಪರಾರಿ: ಆರೋಪಿಯ ಬಂಧನ
ಮಂಜೇಶ್ವರ: ಮಣ್ಣಂಕುಳಿಯ ಅಂಗನವಾಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಜೇಶ್ವರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಅಜಿತ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಕರ್ನಾಟಕದ ಪುತ್ತೂರು ತಾಲ್ಲೂಕಿನ ನೆಲ್ಯಾಡಿ ಕೊಕ್ಕಡ ನಿವಾಸಿ ಅಶ್ರಫ್ (55) ಎಂದು ಗುರುತಿಸಲಾಗಿದೆ. ಈತ ಹಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಪ್ರಸ್ತುತ ಉಪ್ಪಳದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ಧ ಈಗಾಗಲೇ ಮೂರು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಕಳ್ಳತನ ಮಾಡಿದ ವಸ್ತುಗಳನ್ನು…
