ಆರೋಗ್ಯ ಇಲಾಖೆಯಲ್ಲಿ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶ

ತಿರುವನಂತಪುರಂ: ಆರೋಗ್ಯ ಇಲಾಖೆಯಲ್ಲಿ ನಡೆಯುವ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಆಡಳಿತಾತ್ಮಕ ವರ್ಗಾವಣೆಗಳು ಹಾಗೂ ಬಡ್ತಿ ಆಧಾರಿತ ನೇಮಕಾತಿಗಳನ್ನು ಮಾತ್ರ ನಡೆಸಿದರೆ ಸಾಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ. ಮುಂದಿನ ಆದೇಶ ಹೊರಬರುವವರೆಗೆ ಸಾಮಾನ್ಯ ವರ್ಗಾವಣೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆಸ್ಪತ್ರೆಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಪ್ರಸ್ತುತ ಸಾಮಾನ್ಯ ವರ್ಗಾವಣೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಪ್ರಧಾನ ಕಾರ್ಯದರ್ಶಿ…

Read More

ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ಗುವೇದಪಡ್ಪು ನಲ್ಲಿ ಸೃಜನೋತ್ಸವ ಕಾರ್ಯಕ್ರಮ

ಗುವೇದಪಡ್ಪು : ಬಾಲವೇದಿ ಮಕ್ಕಳಿಗಾಗಿ ಸೃಜನೋತ್ಸವ ಕಾರ್ಯಕ್ರಮ ಪ್ರೇರಣಾ ಸಾರ್ವಜನಿಕ ಗ್ರಂಥಾಲಯ (ರಿ ) ಗುವೇದಪಡ್ಪು ನಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಶಿಕ್ಷಕಿ ಚೈತ್ರ ಶೆಟ್ಟಿ ನೆರವೇರಿಸಿದರು. ಗ್ರಂಥಾಲಯದ ಅಧ್ಯಕ್ಷರಾದ ಜಯರಾಮ ಕೊಣಿಬೈಲ್ ರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರುಬೀನಾ ಟೀಚರ್, ಸರಸ್ವತಿ ಕೊಣಿಬೈಲ್,ಜಮೀಲಾ,ಮಾಧವ ಪರಂದಳ, ರತೀಶ್ ಕಾನ,ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ,+2 ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ…

Read More

ವಿದೇಶಿ ಶಿಕ್ಷಣಕ್ಕೆ ‘ಸ್ಟಡಿ ಅಬ್ರಾಡ್’ ಮೇಳ: ಯು.ಟಿ. ಖಾದರ್

ಮಂಗಳೂರು: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ನೇರ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಸೆಪ್ಟೆಂಬರ್ 6ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನ ಗೇಟ್ ನಂ.4ರ ಗಾಯತ್ರಿ ವಿಹಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ‘ಸ್ಟಡಿ ಅಬ್ರಾಡ್’ ಮೇಳ ನಡೆಯಲಿದೆ ಎಂದು ಆರೋಗ್ಯ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ ಆಯೋಜಿಸಲಾಗಿರುವ ಈ ಮೇಳದಲ್ಲಿ ವಿದೇಶದ ಪ್ರತಿಷ್ಠಿತ…

Read More

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡನೀಯ: ಪದ್ಮರಾಜ್ ಪೂಜಾರಿ

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಬಿಜೆಪಿ ಸರ್ಕಾರದ ಕ್ರಮ ಖಂಡನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಹಿರಿಯ ರಾಜಕಾರಣಿ ಹಾಗೂ ಶೋಷಿತ ಸಮುದಾಯದ ಪ್ರಮುಖ ನಾಯಕರಾಗಿದ್ದು, ಅವರಿಗೆ ‘ಶುದ್ಧೀಕರಣ’ದ ಹೆಸರಿನಲ್ಲಿ ಅಪಮಾನ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ….

Read More

ಸೆ.3, 4ರಂದು ಪಿಲಿಕುಳದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವವನ್ನು ಸೆ.3 ಮತ್ತು 4ರಂದು ಪಿಲಿಕುಳದ ಸೌಟ್ಸ್ ಭವನದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶ್ರೀಕೃಷ್ಣ ಬಲರಾಮ ಮಂದಿರದ ಅಧ್ಯಕ್ಷ ಗುಣಾಕರ ರಾಮ ದಾಸ ತಿಳಿಸಿದ್ದಾರೆ. ಎರಡು ದಿನಗಳ ಮಹೋತ್ಸವದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಯುವಜನ ಕಾರ್ಯಕ್ರಮಗಳು ನಡೆಯಲಿವೆ. ಆಳ್ವಾಸ್ ವತಿಯಿಂದ ‘ಶ್ರೀಕೃಷ್ಣ ವೈಭವಂ’, ಅಂತರರಾಷ್ಟ್ರೀಯ ಭಜನ್ ಕ್ಲಬ್ಬಿಂಗ್, ‘ಕೃಷ್ಣ ರಸ ಬಜಾರ್’ ಆಹಾರೋತ್ಸವ, ಮಂಗಳೂರು ಯುವ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸೆ.4ರಂದು ರಾತ್ರಿ 9ರಿಂದ ಮಧ್ಯರಾತ್ರಿ…

Read More

ರಾಜ್ಯದಲ್ಲಿ ‘ಲಂಚ ಗ್ಯಾರಂಟಿ’ ಸರ್ಕಾರದ ಆಡಳಿತ: ಶಾಸಕ ಭರತ್ ಶೆಟ್ಟಿ ವ್ಯಂಗ್ಯ

ಮಂಗಳೂರು: ರಾಜ್ಯದಲ್ಲಿ ‘ಲಂಚ ಗ್ಯಾರಂಟಿ’ ಸರ್ಕಾರದ ಆಡಳಿತ ನಡೆಯುತ್ತಿದ್ದು, ಸಚಿವರಿಗೆ ಕಮಿಷನ್ ನೀಡಲು ಅಧಿಕಾರಿಗಳು ಲಂಚ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ವ್ಯಂಗ್ಯವಾಡಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರು ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪಗಳನ್ನು ಆಡಳಿತ ಪಕ್ಷದ ಶಾಸಕರೇ ಮಾಡುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ ಎಂದರು. ರಾಜ್ಯ ಸಚಿವ ಸಂಪುಟದಲ್ಲಿ ‘ಪೇಮೆಂಟ್ ಕೋಟಾ’ದಡಿ ಸಚಿವರಾಗಿರುವವರು ಅಧಿಕಾರಿಗಳ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಆರೋಪಗಳು…

Read More

ಸಿ.ಟಿ. ರವಿ ಅವರ ಅವಹೇಳನಕಾರಿ ಹೇಳಿಕೆಗೆ ತೀವ್ರ ಖಂಡನೆ – ಕ್ಷಮೆಯಾಚನೆಗೆ ಸಿರಾಜ್ ಬಜ್ಪೆ ಆಗ್ರಹ

ಮಂಗಳೂರು: ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ‘ಸೂಳೆ’ಎಂಬ ಅವಹೇಳನಕಾರಿ ಪದ ಬಳಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಮುಸ್ಲಿಂ ಜನಪ್ರಧಿನಿಧಿಗಳ ಒಕ್ಕೂಟದ ಅಧ್ಯಕ್ಷರಾದ ಸಿರಾಜ್ ಬಜ್ಪೆ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಿ.ಟಿ. ರವಿ ಅವರು ಕೇವಲ ಒಬ್ಬ ಶಾಸಕ ಅಥವಾ ವಿಧಾನ ಪರಿಷತ್ ಸದಸ್ಯರಲ್ಲ. ಅವರು ಈ ರಾಜ್ಯದ ಜವಾಬ್ದಾರಿಯುತ ಸಾರ್ವಜನಿಕ ಪ್ರತಿನಿಧಿಯಾಗಿದ್ದು, ಸಚಿವರಾಗಿಯೂ ಕಾರ್ಯನಿರ್ವಹಿಸಿದವರು. ಇಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಇಂತಹ ಕೀಳುಮಟ್ಟದ ಹಾಗೂ…

Read More

ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ.ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಸಂಸದ ಕ್ಯಾ. ಚೌಟ

ನವದೆಹಲಿ: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಕರಾವಳಿ ಭಾಗದ ಬಹು ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಚಿವರನ್ನು ಖುದ್ದು ಭೇಟಿಯಾದ ಸಂಸದರು, ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ಪ್ರಕ್ರಿಯೆಗೆ ಸ್ಪಂದಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ….

Read More

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ಪ್ರಕರಣದ ವಿವಾದ ಕುರಿತು ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತ ಎಫ್.ಐ.ಆರ್ ದಾಖಲೆ ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕೀಯ ವಿರುದ್ಧ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಲಾಲ್‌ ಭಾಗ್ ಮ.ನ.ಪಾ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಪತ್ರಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ನಡೆಸಿದ ಜಾಗವನ್ನು…

Read More

ಕಲಾ ಶಿಕ್ಷಕ ಝುಬೇರ್ ಖಾನ್ ಕುಡ್ಲ “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ”ಗೆ ಆಯ್ಕೆ

ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯ ಕಲಾ ಶಿಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿರುವ ಝುಬೇರ್ ಖಾನ್ ಕುಡ್ಲ ಅವರು 2026ನೇ ಸಾಲಿನ ಪ್ರತಿಷ್ಠಿತ ‘ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.​ಬಿ ನ್ಯೂಸ್ ಪತ್ರಿಕೆ ಹಾಗೂ ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಇವರ ಜಂಟಿ ಆಶ್ರಯದಲ್ಲಿ, ಇವರ ಸುದೀರ್ಘ ಸಮಾಜಮುಖಿ, ಸಾಹಿತ್ಯಿಕ ಮತ್ತು ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ​ಈ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 06/09/2026 ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ…

Read More
error: Content is protected !!