ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು
ಮಂಗಳೂರು :ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಛಾ ಈ ಬಗ್ಗೆ ಎಸ್ಪಿ ಡಾ.ಅರುಣ್ ಅವರಿಗೆ ದೂರು ನೀಡಿದೆ. ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಯುವಕನೋರ್ವನ ಹೆಸರಿನಲ್ಲಿ ಶ್ರದ್ಧಾಂಜಲಿ ಪೋಸ್ಟ್ ಮಾಡಲಾಗಿತ್ತು. ‘ಬಿಲ್ಲವ ಸಂದೇಶ್’ ಎಂಬ ಫೇಸ್ ಬುಕ್ ಖಾತೆಯಲ್ಲಿ ಮಾಡಲಾದ ಪೋಸ್ಟ್ ನಲ್ಲಿ ‘ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ…
