ನಿರಂತರ 170 ಗಂಟೆ ಭರತನಾಟ್ಯ: ವಿಶ್ವ ದಾಖಲೆ ಬರೆದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ
ನಿರಂತರವಾಗಿ ಏಳು ದಿನಗಳ ಕಾಲ ರಾತ್ರಿ ಹಗಲೆನ್ನದೆ ದಿನವಿಡೀ 170 ಗಂಟೆಗಳ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಯಾಗಿದೆ. ಕಾಲೇಜಿನ ರಾಬರ್ಟ್ ಸಿಕ್ವೇರಾ ಹಾಲ್ನಲ್ಲಿ ರೆಮೋನಾ ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಸತತ 127 ಗಂಟೆ ಭರತನಾಟ್ಯ ಪ್ರದರ್ಶನ ನೀಡಿದ್ದೇ ಈವರೆಗಿನ ದಾಖಲೆಯಾಗಿತ್ತು. ಇದೀಗ 170 ಗಂಟೆ ಸತತ ಪ್ರದರ್ಶನ…
