ಡಿ.20 ರಿಂದ ಕರಾವಳಿ ಉತ್ಸವ: 6 ಬೀಚ್‍ಗಳಲ್ಲಿ ಕಾರ್ಯಕ್ರಮ
ಮಂಗಳೂರು: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕøತಿಕ ಮತ್ತು ಸಾಹಸಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಡಲ ತೀರಗಳಿಗೆ ಪ್ರವಾಸಿಗರನ್ನು ಆಕರ್ಷಿಸಲು 6 ಬೀಚ್‍ಗಳಲ್ಲಿ ಕರಾವಳಿ ಉತ್ಸವದ ಅಂಗವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಪಣಂಬೂರು, ಉಳ್ಳಾಲ,…
