ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!
ಮಂಗಳೂರು:ಸಮಾಜದಲ್ಲಿ ವಿಭಿನ್ನವಾಗಿ ಕಾಣುವವರೊಂದಿಗೆ ಸಹೋದರತ್ವ ಹಾಗೂ ಸಮಾನತೆಯ ಸಂದೇಶ ಸಾರುವ ಉದ್ದೇಶದಿಂದ ರಾಜಕೇಸರಿ ಸೇವಾ ಟ್ರಸ್ಟ್ (ರಿ.), ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನವಸಹಜ ಸಮುದಾಯ ಸಂಘಟನೆ (ರಿ.) ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರೊಂದಿಗೆ ವಿಶಿಷ್ಟ ರೀತಿಯಲ್ಲಿ ರಕ್ಷಾಬಂಧನ ಸಂಭ್ರಮವನ್ನು ಆಚರಿಸಲಾಯಿತು. ಮಂಗಳೂರಿನ ಪೊಲೀಸ್ ಲೇನ್‌ನ ಶ್ರೀ ಮುನೀಶ್ವರ ಮಹಾಗಣಪತಿ ಕಲಾಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಪರಸ್ಪರ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು….
