ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಐವನ್ ಡಿ’ಸೋಜಾ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬಾರದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆಗ್ರಹಿಸಿದರು. ನಗರದ ಮನಪಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಿಯ ಸಾಧಕ-ಬಾಧಕಗಳ ಕುರಿತು ಸಮಗ್ರ ಚರ್ಚೆ ನಡೆಸಿದ ಬಳಿಕವೇ ತೀರ್ಮಾನ ಕೈಗೊಳ್ಳಬೇಕು. ಸ್ಥಳೀಯ ಜನರ ಅಭಿಪ್ರಾಯ, ಕೃಷಿ, ತೋಟಗಾರಿಕೆ, ಗ್ರಾಮೀಣ ವಸತಿ ಹಾಗೂ ಜೀವನೋಪಾಯವನ್ನು ಪರಿಗಣಿಸದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಬಾರದು ಎಂದರು. ಕರ್ನಾಟಕದ 10 ಜಿಲ್ಲೆಗಳ 33 ತಾಲೂಕುಗಳು…

Read More

ಪಕ್ಷಕ್ಕೆ ಮುಜುಗರ ಬೇಡವೆಂದು ನಾಗೇಂದ್ರ ರಾಜೀನಾಮೆ: ಡಿಕೆ ಶಿವಕುಮಾರ್

ಬೆಂಗಳೂರು: ಪಕ್ಷಕ್ಕೆ ಮುಜುಗರವಾಗಬಾರದೆಂಬ ಉದ್ದೇಶದಿಂದ ಸಚಿವ ಬಿ. ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪ ಹಾಗೂ ಸದನದ ಕಲಾಪಕ್ಕೆ ಉಂಟಾಗುತ್ತಿರುವ ಅಡಚಣೆಯಿಂದ ನೊಂದು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂದರು. ಬಿಜೆಪಿ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡುತ್ತಿದೆ. ನಾಲ್ಕು ಬಾರಿ ಗೆದ್ದಿರುವ ದಲಿತ ನಾಯಕ ನಾಗೇಂದ್ರ ವಿರುದ್ಧ ರಾಜಕೀಯ ದುರುದ್ದೇಶದಿಂದ ಆರೋಪ…

Read More

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ: ಮುಖ್ಯ ನ್ಯಾಯಮೂರ್ತಿಗಳ ಭರವಸೆ

ಮಂಗಳೂರು:* ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ವಿಭು ಬಖ್ರು ಭರವಸೆ ನೀಡಿದ್ದಾರೆ ಎಂದು ಹೈಕೋರ್ಟ್ ಕರಾವಳಿ ಸಂಚಾರಿ ಪೀಠ ಸ್ಥಾಪನೆ ಹೋರಾಟ ಸಮಿತಿಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ. ಕರಾವಳಿ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಕರ್ನಾಟಕ ಸರ್ಕಾರ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲು…

Read More

ಆಗಸ್ಟ್ 31ರಂದು ‘ಪುತ್ತೂರು ಚಲೋ’ ಜನಜಾಗೃತಿ ಆಂದೋಲನ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಆಗಸ್ಟ್ 31ರಂದು ಪುತ್ತೂರು ಚಲೋ- ಜನಜಾಗೃತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಪ್ರಚಾರ ಪ್ರಸಾರ ಸಹ ಪ್ರಮುಖ್ ಪ್ರದೀಪ್ ಸರಿಪಲ್ಲ ತಿಳಿಸಿದ್ದಾರೆ. ಸ್ವಾಭಿಮಾನಿ ಹಿಂದೂ ಸಮಾಜದ ಜಾಗೃತಿಗಾಗಿ ವಿಶ್ವ ಹಿಂದೂ ಪರಿಷತ್ – ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಈ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು. ಶುಕ್ರವಾರ ನಗರದ ವಿಎಚ್ ಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ…

Read More

ಗಡಿನಾಡ ಕನ್ನಡ ಸಂಘದಿಂದ ಓಣಂ ಆಚರಣೆ

ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ(ರಿ) ಕಾಸರಗೋಡು ಇವರಿಂದ ಸಂಘದ 243ನೇ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಓಣಂ ಹಬ್ಬದ ಆಚರಣೆ ಹಾಗೂ ಸಾಹಿತ್ಯ ಗಾನ ನೃತ್ಯ ವೈಭವವನ್ನು 28 ಆಗಸ್ಟ್ 2026ರಂದು ಸಂಘದ ಹಿತೈಷಿಗಳಾದ ಶ್ರೀ ಮಹಾಲಿಂಗ ಇವರ ಮನೆಯಲ್ಲಿ ನಡೆಸಲಾಯಿತು. ಓಣಂ ಹಬ್ಬದ ವಿಶೇಷತೆಗಳಲ್ಲೊಂದಾದ ಪೂಕಳಂ ಅಂದರೆ ಹೂವಿನ ಆಕರ್ಷಕ ರಂಗೋಲಿ ಎಲ್ಲರ ಗಮನ ಸೆಳೆಯಿತು. ಸಂಘದ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಓಣಂ ಹಬ್ಬದ ಆಚರಣೆ ಮತ್ತು ಮಹತ್ವದ ಬಗ್ಗೆ…

Read More

ಸುಮಾರು 08 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮೆರೆಸಿಕೊಂಡಿದ್ದ ಎಲ್ ಪಿ ಸಿ ವಾರೆಂಟ್ ಆರೋಪಿತನ ಬಂಧನ

ಮಂಗಳೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿ, ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2006ರಲ್ಲಿ ಮೊ.ನಂ. 166/2006, ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿತನು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು. ವಾರಂಟ್ ಜಾರಿಯಲ್ಲಿದ್ದ ಆರೋಪಿತ ಮುವಾಚ್ (45), ಮೊಹಮ್ಮದ್ ಬಾವಾ ಉಸ್ತಾದ್ ಅವರ ಪುತ್ರ, ಹಿಲೇರಿ ನಗರ, ಮುಕ್ಕಚೇರಿ,…

Read More

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

ವೇಣೂರು: ದರೋಡೆ ಪ್ರಕರಣವೊಂದರಲ್ಲಿ ಆರೋಪಿಯಾಗಿ, ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅಪರಾಧ ಸಂಖ್ಯೆ 16/2012, ಕಲಂ 395 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಕೆ @ ಶಿನಪ್ಪ @ ಶೀನ (43) ಎಂಬಾತನನ್ನು ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿಂದ ಪೊಲೀಸರು ಬಂಧಿಸಿದ್ದಾರೆ. ವೇಣೂರು ಠಾಣೆಯ ಎಎಸ್ಐ ಬೆನ್ನಿಚನ್, ಹೆಚ್‌ಸಿ ಕೃಷ್ಣ, ಸಿಪಿಸಿ ಬಸವರಾಜ್ ಎಸ್‌ಪಿ ಹಾಗೂ ಸಿಪಿಸಿ ಮೋಹನ್…

Read More

SDTU ದೇರಳಕಟ್ಟೆ ಬ್ಲಾಕ್ ಸಮಿತಿ ಅಸ್ತಿತ್ವಕ್ಕೆ : ಅಧ್ಯಕ್ಷರಾಗಿ ಉಸ್ಮಾನ್ ಮಲಾರ್,ಕಾರ್ಯದರ್ಶಿಯಾಗಿ ಅಮೀರ್ ಅಡ್ಕರಪಡ್ಪು ಆಯ್ಕೆ

ದೇರಳಕಟ್ಟೆ, ಆಗಸ್ಟ್ 28:ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ದೇರಳಕಟ್ಟೆ ಬ್ಲಾಕ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು. ದಿನಾಂಕ 28/08/2026ರಂದು ದೇರಳಕಟ್ಟೆಯಲ್ಲಿ ನಡೆದ ಸಭೆಯಲ್ಲಿ SDTU ಜಿಲ್ಲಾಧ್ಯಕ್ಷರಾದ ರಹಿಮಾನ್ ಬೋಳಿಯಾರ್ ಅವರ ನೇತೃತ್ವದಲ್ಲಿ ನೂತನ ಬ್ಲಾಕ್ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ಉಸ್ಮಾನ್ ಮಲಾರ್, ಉಪಾಧ್ಯಕ್ಷರಾಗಿ ಮೊಹಮ್ಮದ್ ಅನ್ಸಾರ್ ದೇರಳಕಟ್ಟೆ, ಕಾರ್ಯದರ್ಶಿಯಾಗಿ ಮಹಮ್ಮದ್ ಅಮೀರ್ ಅಡ್ಕರಪಡ್ಪು, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಸವಾದ್ ಹಾಗೂ ಕೋಶಾಧಿಕಾರಿಯಾಗಿ ಮಹಮ್ಮದ್ ಅಝೀಮ್ ಅಡ್ಕರಪಡ್ಪು ಆಯ್ಕೆಯಾಗಿದ್ದಾರೆ.ಸಮಿತಿ ಸದಸ್ಯರಾಗಿ ಮಹಮ್ಮದ್ ಮುಸ್ತಫಾ ,ನಝೀರ್ ಅಹ್ಮದ್…

Read More

ಪೋಕ್ಸೋ ಪ್ರಕರಣದಲ್ಲಿ ಆರೋಪಿಯ ದಸ್ತಗಿರಿ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪ್ರಕರಣದ ಆರೋಪಿಯಾದ ಆಂಧ್ರಪ್ರದೇಶದ ಜಂಗಲ್ಪಲ್ಲಿ ನಿವಾಸಿ ಶ್ರೀಕಾಂತ್‌ (21) ಎಂಬಾತನು 2025ನೇ ಸಾಲಿನ ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ ಬಲವಂತವಾಗಿ ಅತ್ಯಾಚಾರ ಮಾಡಿ, ಯಾರಿಗೂ ತಿಳಿಸದಂತೆ ಬೆದರಿಕೆ ಒಡ್ಡಿದ್ದು, ಸದ್ರಿ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುತ್ತಾಳೆ. ಈ ಬಗ್ಗೆ ದಿನಾಂಕ 23.08.2026 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:60/2026, ಕಲಂ 64(2)(m),65(1),351(2) BNS ಕಲಂ:4(2),6 ಪೋಕ್ಸೋ ಪ್ರಕರಣದ ದಾಖಲಿಸಿಕೊಂಡು ತನಿಖೆ ಪ್ರಗತಿಯಲ್ಲಿರುತ್ತದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಆರೋಪಿ ಶ್ರೀಕಾಂತ್‌…

Read More

ಅಡಿಕೆ ಹೆಕ್ಕಲು ತೋಟಕ್ಕೆ ತೆರಳಿದ್ದ ವೃದ್ಧೆ ತೋಡಿನಲ್ಲಿ ಶವವಾಗಿ ಪತ್ತೆ

ಕಾಸರಗೋಡು: ಅಡಿಕೆ ಹೆಕ್ಕಲು ತೋಟಕ್ಕೆ ತೆರಳಿ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಶವ ಸಮೀಪದ ತೋಡಿನಲ್ಲಿ ಪತ್ತೆಯಾಗಿದೆ.ಮಲ್ಲಂಪಾರೆ ತಿಮ್ಮನಗುಂಡಿಯ ದಿವಂಗತ ಚೋಮಣ್ಣ ನಾಯ್ಕರ ಪತ್ನಿ ಗುಲಾಬಿ (68) ಸಾವನ್ನಪ್ಪಿದ ದುರ್ದೈವಿ. ​ ತೋಟಕ್ಕೆ ಹೋದವರು ವಾಪಸ್ ಬಾರದಿದ್ದದರಿಂದ ಮನೆಯವರು ಹುಡುಕಾಟ ನಡೆಸಿದಾಗ, ತೋಡಿನ ಬದಿಯಲ್ಲಿ ಅವರ ಚಪ್ಪಲಿ ಪತ್ತೆಯಾಗಿತ್ತು. ಕೂಡಲೇ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ನಾಗರಿಕರು ಜಂಟಿ ಶೋಧ ಕಾರ್ಯ ಆರಂಭಿಸಿದ್ದರು.ಕೈಕಾಲು ತೊಳೆಯಲು ತೋಡಿಗೆ ಇಳಿದಾಗ ಆಯತಪ್ಪಿ ನೀರಿನಲ್ಲಿ ಕೊಚ್ಚಿಹೋಗಿ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ…

Read More
error: Content is protected !!