ನ.28 ಕ್ಕೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ತನಕ ಪ್ರಧಾನಿ ಮೋದಿ ‘ರೋಡ್ ಶೋ’
ಉಡುಪಿ: ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11.40 ಸುಮಾರಿಗೆ ಉಡುಪಿ ಬನ್ನಂಜೆಯ ನಾರಾಯಣಗುರು ಸರ್ಕಲ್ ನಿಂದ ಕಲ್ಸಂಕದವರೆಗೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಬಳಿಕ ಅವರು ಕೃಷ್ಣಮಠಕ್ಕೆ ತೆರಳಿ ಶ್ರೀಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಕಡಿಯಾಳಿಯ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರನ್ನು ಭವ್ಯವಾಗಿ…
