ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲೇ ಬಾರದು : ಎಂಎಲ್‌ಸಿ ಭೋಜೇ ಗೌಡ .
ಮಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲೇ ಬಾರದು, ಹಾಗಿದ್ದರೆ ಮಾತ್ರ ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಭೋಜೇ ಗೌಡ ಹೇಳಿದರು . ಅವರು ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾನುವಾರ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ಕುಷ್ಮಾ ಇದರ ದ.ಕ. ಜಿಲ್ಲಾ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ , ಐಎಎಸ್ , ಐಪಿಎಸ್ ಅಧಿಕಾರಿಗಳು ತಾವು ಕೂಡ ತಳಮಟ್ಟದ ಇಂತಹ ಶಿಕ್ಷಣ…
