ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರ ದಾಳಿ. ಆರೋಪಿಗಳ ಬಂಧನ.
ಮಂಗಳೂರು: ಅಕ್ರಮ ಕಸಾಯಿ ಖಾನೆ ಮಾಡಿಕೊಂಡಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ 3 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿ ಮನೆಯನ್ನು ಮುಟ್ಟು ಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. ಮಂಗಳೂರು ತಾಲೂಕು ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟುವಿನ ಅಂಚೆ ಕಛೇರಿ ರಸ್ತೆಯ ಅಬ್ದುಲ್ ಖಾದರ್ ತನ್ನ ಮನೆಯಲ್ಲಿ ಅಕ್ರಮವಾಗಿ ದನ ವಧೆಯನ್ನು ಮಾಡುತ್ತಿದ್ದ ಬಗ್ಗೆ ಮಾಹಿತಿಯನ್ನು ಪಡೆದ ಸುರತ್ಕಲ್ ಪೊಲೀಸ್ ಠಾಣೆ ಪಿಎಸ್‌ಐ ರಘುನಾಯಕ್ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚೊಕ್ಕಬೆಟ್ಟುವಿನ…
