ಕೊಲ್ಲಮೊಗ್ರು ಪಂಚಾಯತ್ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್ ಗಳನ್ನು ಖಾಸಗಿ…
