ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವದಲ್ಲಿ ‘ಚಿಗುರಿದ ಕನಸು’ ಚುಟುಕು ಸಂಕಲನ ಬಿಡುಗಡೆ
ಕಾಸರಗೋಡು:-ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಪೋಷಿಸುವ ಮೂಲಕ ಕಾಸರಗೋಡಿನಲ್ಲಿ ಕನ್ನಡವನ್ನು ಕಟ್ಟುವ ಕೆಲಸ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯುವ ಸಮ್ಮೇಳನ, ಸಮಾವೇಶ, ಸಾಹಿತ್ಯೋತ್ಸವ ಕಾರ್ಯಕ್ರಮಗಳು ಕೇರಳ ಕರ್ನಾಟಕ ರಾಜ್ಯ ಮಟ್ಟದ ಲ್ಲಿ ಗುರುತಿಸಿ ಕೊಂಡಿದೆ. ಎಂದು ಕವಿ ,ಅಧ್ಯಾಪಕ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಹೇಳಿದರು. ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ…
