ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ-ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರಿಗೆ ಅಭಿನಂದನೆ
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ…
