ಆ.21ರಂದು ಮಂಗಳೂರಿನಲ್ಲಿ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ
ಮಂಗಳೂರು: ಪ್ರೊಡಕ್ಟಿವಿಟಿ ಕೌನ್ಸಿಲ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಆಗಸ್ಟ್ 21ರಂದು ಮಂಗಳೂರಿನ ಓಲ್ಡ್ ಪೋರ್ಟ್ ರಸ್ತೆಯ ತಾಜ್ ವಿವಾಂತ ಹೋಟೆಲ್ ಎದುರಿನ ರೆಡ್ ಕ್ರಾಸ್ ಪ್ರೇರಣಾ ಸಭಾಂಗಣದಲ್ಲಿ ಒಂದು ದಿನದ ಮೆಗಾ ಎಂಎಸ್‌ಎಂಇ ಮತ್ತು ಸ್ಟಾರ್ಟ್‌ಅಪ್ ಸಮಾವೇಶ ಆಯೋಜಿಸಲಾಗಿದೆ ಎಂದು ನಿರ್ದೇಶಕ ಎಸ್.ಎಸ್. ನಾಯಕ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ಉದ್ಯಮಿಗಳು ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದ್ದು, 400ಕ್ಕೂ ಹೆಚ್ಚು ಉದ್ಯಮಿಗಳು…
