ಮಂಜೇಶ್ವರ ಅನಂತೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ನಾಗರ ಪಂಚಮಿ: ಹರಿದುಬಂದ ಭಕ್ತ ಸಾಗರ
ಮಂಜೇಶ್ವರ: ತುಳುನಾಡಿನ ಪ್ರಸಿದ್ಧ ಹಾಗೂ ಪವಿತ್ರ ನಾಗಕ್ಷೇತ್ರಗಳಲ್ಲಿ ಒಂದಾದ ಐತಿಹಾಸಿಕ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ಅಧ್ಯಾತ್ಮಿಕ ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು. ಹದಿನೆಂಟು ಪೇಟೆಯ ದೇಗುಲವೆಂಬ ಖ್ಯಾತಿ ಪಡೆದಿರುವ ಇಲ್ಲಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ಪವಿತ್ರ ದಿನದಂದು ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ನಾಗದೇವ ಹಾಗೂ ಶೇಷಸಹಿತ ಅನಂತೇಶ್ವರನ ದರ್ಶನ ಪಡೆದು ಕೃತಾರ್ಥರಾದರು. ನಾಗ…
