ಕಾಸರಗೋಡು ರಾಷ್ಟ್ರ ಧ್ವಜಕ್ಕೆ ಅವಮಾನ- ಮಂತ್ರಿಗಳು, ಶಾಸಕರು, MP ಗಳ ನಿರ್ಲಕ್ಷ್ಯ…ಖಂಡನಿಯ BJP

ಕಾಸರಗೋಡು ಜಿಲ್ಲಾಡಳಿತದ ವತಿಯಿಂದ ನಡೆದ ಸರಕಾರಿ ಅಧಿಕೃತ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರ ಧ್ವಜವನ್ನು ಸಮರ್ಪಕವಾಗಿ ಅಳವಡಿಸದಿರುವ ಘಟನೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕಾಸರಗೋಡು ಸಂಸದರು ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ರಾಷ್ಟ್ರ ಧ್ವಜದ ನಿರ್ವಹಣೆಯಲ್ಲಿ ಲೋಪವಾಗಿರುವುದು ಖಂಡನೀಯ ಎಂದುಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ BM ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ಧ್ವಜವು ದೇಶದ ಗೌರವ ಮತ್ತು ಸಾರ್ವಭೌಮತ್ವದ ಸಂಕೇತವಾಗಿದ್ದು, ಸರಕಾರಿ ಕಾರ್ಯಕ್ರಮಗಳಲ್ಲಿ ಅದನ್ನು ಅತ್ಯಂತ…

Read More

ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಚೇವಾರು: ಸ್ಥಳೀಯ ಚೇವಾರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಾರ್ಡ್ ಪ್ರತಿನಿಧಿ ಅಬ್ದುಲ್ ಅಸೀಸ್ ಚೇವಾರ್ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಕಲಂದರ್ ಶಾಫಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾತೃ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಜೇಶ್ವರಿ.ಬಿ ಪ್ರಾಸ್ತಾವಿಕ…

Read More

SDTU ಮಂಗಳೂರು ನಗರ ಜಿಲ್ಲಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆಗಸ್ಟ್ 15: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ SDTU ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ನಗರ ಜಿಲ್ಲಾ ಅಧ್ಯಕ್ಷ ರಹಿಮಾನ್ ಬೋಳಿಯಾರ್ ಅವರು ಸಂದೇಶ ಭಾಷಣ ಮಾಡಿದರು. ದೇಶದ ಸ್ವಾತಂತ್ರ್ಯವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ ಮತ್ತು ನ್ಯಾಯವನ್ನು ಖಾತ್ರಿಪಡಿಸುವಂತಿರಬೇಕು. ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮ ಮಹತ್ವದ್ದಾಗಿದ್ದು, ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಗೌರವಯುತ…

Read More

ಮಂಜೇಶ್ವರದಲ್ಲಿ 162 ಗ್ರಾಂ ಎಂಡಿಎಂಎ ವಶಕ್ಕೆ: ಒಬ್ಬ ಸೆರೆ

​ಮಂಜೇಶ್ವರ: ಓಣಂ ವಿಶೇಷ ಡ್ರೈವ್‌ನ ಭಾಗವಾಗಿ ನಡೆಸಿದ ತಪಾಸಣೆಯ ವೇಳೆ ಕಾರಿನಲ್ಲಿ ಕೊಂಡೊಯ್ಯುತ್ತಿದ್ದ 162 ಗ್ರಾಂ ಎಂಡಿಎಂಎ ಡ್ರಗ್ಸ್ ಅನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ​ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಎಕ್ಸೈಸ್ ತಂಡ ಬಂಧಿಸಿದೆ. ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮದ ಒರ್ಮೊಡಿ ಕಂದಿಗೆ ದೇಶದ ಅಬೂಬಕರ್ ಎಂಬವರ ಮಗ ಅಬ್ದುಲ್ ಅಸೀಸ್ ಬಂಧಿತ ಆರೋಪಿಯಾಗಿದ್ದಾನೆ. ​ಬದಿಯಡ್ಕ ಎಕ್ಸೈಸ್ ರೇಂಜ್ ಇನ್ಸ್‌ಪೆಕ್ಟರ್ ಜಿಷ್ಣು ಪಿ.ಆರ್ ಮತ್ತು ಅವರ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಈ ಆರೋಪಿಯನ್ನು ಬಂಧಿಸಿದ್ದಾರೆ. ಓಣಂ ಹಬ್ಬದ…

Read More

ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಾನಸ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದೇಶಭಕ್ತಿಗೀತೆಗಳು, ನೃತ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹೆಚ್ಚಿಸಿದರು. ದೇಶಭಕ್ತಿ, ರಾಷ್ಟ್ರೀಯ ಏಕತೆ ಹಾಗೂ ದೇಶದ ಮೇಲಿನ ಗೌರವವನ್ನು ಸಾರಿದ ಈ ಕಾರ್ಯಕ್ರಮವು ಶಾಲಾ…

Read More

ಮೂಡಂಬೈಲು ಶಾಲೆಯಲ್ಲಿ ವಿಜ್ರಂಭಣೆಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಮೂಡಂಬೈಲು ಇಲ್ಲಿ ಬಹಳ ವಿಜ್ರಂಭಣೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿ.ಟಿ.ಎ ಅಧ್ಯಕ್ಷರಾದ ಅಬ್ಬಾಸ್ ಪಮ್ಮಾರ್ ವಹಿಸಿದ್ದರು. ದ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಸಂಜೀವ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಜಾಯತ್ ಉಪಾಧ್ಯಕ್ಷೆಯಾದ ಶ್ರೀಮತಿ ಉಷಾ ಪೂಂಜ ಅವರು ಭಾಗವಹಿಸಿದ್ದರು. ಶ್ರೀಯುತ ಶಿವರಾಮ ಪದ ಕಣ್ಣಾಯ,ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ, ಶ್ರೀ ಶಶಿ , ಶ್ರೀ ರಾಂ ಪ್ರಕಾಶ್, ಮಾಜಿ ಮೀಂಜ…

Read More

ಖರ್ಗೆ ಭಾಗವಹಿಸಿದ್ದ ಸಭಾಂಗಣ ಶುದ್ಧೀಕರಣ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು :ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ ಸಭೆಯ ಸ್ಥಳವನ್ನು ಅಶುಧ್ದಗೊಂಡಿದೆ ಎಂದು ಶುದ್ದೀಕರಣಗೊಳಿಸಿದ ಕಾರ್ಯವನ್ನು ಖಂಡಿಸಿಮಂಗಳೂರು ಪಾಲಿಕೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತೀಚಿಗೆ ಉತ್ತರಖಂಡದ ಹಲ್ದ್ವಾನಿ ರಾಮಲೀಲ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿದ ನಂತರ ಅಶುದ್ಧಿಗೊಂಡಿದೆ ಎಂದು ಅಸಂಧಾನಿಕ ಹೇಳಿಕೆ ನೀಡಿ ಸ್ಥಳ ಶುದ್ಧೀಕರಣ ನಡೆಸಲಾಗಿದೆ ಎಂದಾರೋಪಿಸಲಾಗಿದೆ. ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರ ಈ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ಸಂಜೆ…

Read More

ರಥಬೀದಿಯಲ್ಲಿ ರಿಕ್ಷಾ ಚಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ- ಧ್ವಜಾರೋಹಣ ನೆರವೇರಿಸಿದ ಶೀರೂರು ಶ್ರೀ

ಉಡುಪಿ: ನಗರದ ರಥಬೀದಿಯ ರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಪರ್ಯಾಯ ಶೀರೂರು ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಯಾಗಿ ಭಾಸ್ಕರ್ ಸೇರಿಗಾರ್ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಸಾದ್ ತಂತ್ರಿ ಅಲೆವೂರು, ಸರ್ವಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ನಗರದ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಂಡಿತು . ಐದು ದಿನಗಳ ಪರ್ಯಂತ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ , ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿರುವುದು . ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ಮಹಾನಗರ ಮಾನ್ಯ ಸಂಘಚಾಲಕ್ ಡಾ . ಸತೀಶ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು . ರಾಷ್ಟ್ರೀಯ…

Read More

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು, ಆ. 13: ಪ್ರಿಸನ್ ಮಿನಿಸ್ಟ್ರಿ ಇಂಡಿಯಾ (ಪಿಎಂಐ), ಮಂಗಳೂರು ಘಟಕದ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಮಂಗಳೂರು ಸಹಯೋಗದಲ್ಲಿ ನಗರದ ಜೈಲ್ ರಸ್ತೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಕೈದಿಗಳಿಗಾಗಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರ ಉದ್ಘಾಟಿಸಿ ಮಾತನಾಡಿದ ಜೈಲು ಅಧೀಕ್ಷಕ ಶರಣಬಸಪ್ಪ ಅವರು, ಜೈಲನ್ನು ಕೇವಲ ಶಿಕ್ಷೆಯ ಸ್ಥಳವಾಗಿ ನೋಡದೆ ‘ತಿದ್ದುಪಡಿ ಕೇಂದ್ರ’ವಾಗಿ ಪರಿಗಣಿಸಬೇಕು. ತಮ್ಮ ತಪ್ಪುಗಳನ್ನು ಅರಿತುಕೊಂಡು ಜೀವನವನ್ನು ಸುಧಾರಿಸಿಕೊಂಡು ಸಮಾಜಕ್ಕೆ ಜವಾಬ್ದಾರಿಯುತ ವ್ಯಕ್ತಿಗಳಾಗಿ ಮರಳಲು ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ…

Read More
error: Content is protected !!