ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್ ವಿದ್ಯಾರ್ಥಿ ಸಂಘಗಳ ಪದಗ್ರಹಣ ಸಮಾರಂಭ

ಬೆಂಗಳೂರು:ಮಾಹಿತಿ ತಂತ್ರಜ್ಞಾನ ಶಾಲೆಯ ವಿದ್ಯಾರ್ಥಿ ಸಂಘಗಳಾದ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್‌ನ ಪದಗ್ರಹಣ ಸಮಾರಂಭಮಾಹಿತಿ ತಂತ್ರಜ್ಞಾನ ಶಾಲೆ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ, ಬೆಂಗಳೂರಿನ ಟೆಕ್ನೋಫೈಟ್ ಮತ್ತು ಸೈಬರ್ನೆಟಿಕ್ಸ್ ವಿದ್ಯಾರ್ಥಿ ಸಂಘಗಳ ಪದಗ್ರಹಣ ಸಮಾರಂಭವು ನಿರೂಪಕರಾದ ಕು. ಮುಸ್ಕಾನ್ ಮತ್ತು ಕು. ಸಮಂತಾ ಅವರು ಗಣ್ಯರು, ಬೋಧಕ ವರ್ಗ, ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸುವುದರೊಂದಿಗೆ ಆರಂಭವಾಯಿತು. ಕಾರ್ಯಕ್ರಮವು ಕು. ಡೆಲಿಶಾ, ಕು. ಕ್ರಿಸ್ಟೋಬೆಲ್ ಹಾಗೂ ಶ್ರೀ ಹ್ಯಾರಿಸನ್ ಅವರ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡು, ಸಮಾರಂಭಕ್ಕೆ ಭಕ್ತಿಪೂರ್ವಕ…

Read More

ಪೇಸ್ ನಾಲೆಡ್ಜ್ ಸಿಟಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು, ಆಗಸ್ಟ್ 15: ಪಿ.ಎ. ಎಜುಕೇಶನ್ ಟ್ರಸ್ಟ್‌ನ ವಿವಿಧ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಗಳೂರಿನ ಪೇಸ್ ನಾಲೆಡ್ಜ್ ಸಿಟಿ ಆವರಣದಲ್ಲಿ ಶನಿವಾರ ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಎ. ಎಜುಕೇಶನ್ ಟ್ರಸ್ಟ್ ಸಂಸ್ಥೆಗಳ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಇಕ್ಬಾಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಡಾ. ಇಕ್ಬಾಲ್, ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿ, ದೇಶದ ಸ್ವಾತಂತ್ರ್ಯವನ್ನು ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸಬೇಕು…

Read More

ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ; ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಪರೇಡ್ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಿ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆಯನ್ನು ಸದಾ ಕಾಪಾಡುವ ಸಂಕಲ್ಪ ಮಾಡಬೇಕು. ವಿವಿಧ ಭಾಷೆ,…

Read More

ಕಾಸರಗೋಡಿನಲ್ಲಿ ರಾಮಾಯಣ ಸತ್ಸಂಗ

ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಪ್ರಖಂಡ ನೇತೃತ್ವದಲ್ಲಿ ರಾಮಾಯಣ ಸತ್ಸಂಗ ಕಾರ್ಯಕ್ರಮ ಕಾಸರಗೋಡು ಹೃದಯ ಭಾಗದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜರಗಿತು. 3 ನೇ ದಿನದ ಕಾರ್ಯಕ್ರಮ ಹಿರಿಯ ವೈದ್ಯರು ಹಾಗೂ ಯಕ್ಷಗಾನ ಅರ್ಥದಾರಿಯಾದ ಡಾl ಕೆ.ಎನ್.ಬಲ್ಲಾಳ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮಣೋಜಿ ರಾವ್ ಬಹುಮಾನ್ ಪಿಲಿಕುಂಜೆ, ವಿಎಚ್ ಪಿ ಕಾಸರಗೋಡು ಪ್ರಖಂಡ ಗೌರವಾಧ್ಯಕ್ಷ ಡಾ| ಕೆ.ಎನ್.ವೆಂಕಟ್ರಮಣ ಹೊಳ್ಳ, ವಿಎಚ್‌ಪಿ ಹಿರಿಯ ಕಾರ್ಯಕರ್ತ ಎ.ಟಿ.ನಾಯಕ್, ಉಪಾಧ್ಯಕ್ಷ ಗುಣಪಾಲ ಅಮೈ, ಕಾರ್ಯದರ್ಶಿ ಕಿಶೋರ್…

Read More

ಮಂಜೇಶ್ವರ ಒಳಪೇಟೆ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಮಂಜೇಶ್ವರ: ಮಂಜೇಶ್ವರ ಒಳಪೇಟೆ ರೈಲ್ವೆ ನಿಲ್ದಾಣದ ಆವರಣದಲ್ಲಿ ಆಟೋ ಚಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಗೋವಿಂದ ಭಟ್ ಅವರು ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷರಾದ ಹನೀಫ್ ಹಾಗೂ ಧರ್ಮರಾಜ್ ಅವರು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಫೈಝಲ್ ಅವರು ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಜಯಪ್ರಕಾಶ್ ಅವರು ವಂದಿಸಿದರು. ಕೋಶಾಧಿಕಾರಿ ಶೇಫಿಕ್ ಅವರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ…

Read More

ಗಡಿನಾಡಿನಲ್ಲಿ ಸಂಚರಿಸುವ ಬಸ್ಸುಗಳಲ್ಲಿ ಕನ್ನಡ ನಾಮಫಲಕದ ಬೇಡಿಕೆ

ಕಾಸರಗೋಡು :- ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘ (ರಿ) ಕಾಸರಗೋಡು ಇದರ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಇವರು ಇತ್ತೀಚೆಗೆ ಕಾಸರಗೋಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಮಾಹಿನ್ ಇವರನ್ನು ಭೇಟಿಯಾಗಿ ಗಡಿನಾಡಾಗಿರುವ ಕಾಸರಗೋಡಿನಲ್ಲಿ ಸಂಚರಿಸುವ ಕೇರಳ ರಾಜ್ಯದ ಬಸ್ಸುಗಳಲ್ಲಿ ಮಲಯಾಳಂ ಜೊತೆಗೆ ಕನ್ನಡ ಭಾಷೆಯಲ್ಲಿಯೂ ನಾಮಫಲಕಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿ ಪತ್ರ ಹಸ್ತಾಂತರಿಸಿದರು. ಈ ಪ್ರದೇಶದಲ್ಲಿ ಹೆಚ್ಚಾಗಿ ಕನ್ನಡ ಭಾಷೆ ಮಾತನಾಡುವ ಜನರು ವಾಸಿಸುವುದರಿಂದ ಓದಲು ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿಯೂ ನಾಮಫಲಕ ಅಳವಡಿಸುವುದು ಅಗತ್ಯ ಎಂದು…

Read More

ಕುಬಣೂರು ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘದಿಂದ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ ಆಚರಣೆ

ಉಪ್ಪಳ: ಡಾ. ಬಿ.ಆರ್. ಅಂಬೇಡ್ಕರ್ ಕಲಾ ಸಂಘ ಕುಬಣೂರು ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕುಬನೂರು ಶ್ರೀರಾಮ ಎ.ಯು.ಪಿ. ಶಾಲೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ, ಹೈಯರ್ ಸೆಕೆಂಡರಿ ಹಾಗೂ ಪದವಿ ವಿಭಾಗಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Read More

ಮಂಜೇಶ್ವರ: ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆಗಳಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ : ಗಮನ ಸೆಳೆದ ವಿದ್ಯಾರ್ಥಿಗಳ ಭಾರತ ಭೂಪಟದ ಮಾನವ ಸರಪಳಿ

ಮಂಜೇಶ್ವರ: 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಮಂಜೇಶ್ವರದ ಪ್ರತಿಷ್ಠಿತ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಗಳಾದ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳಲ್ಲಿ ಅತ್ಯಂತ ಸಡಗರ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ವಿಶೇಷಾಕರ್ಷಣೆಯಾಗಿ ವಿದ್ಯಾರ್ಥಿಗಳು ಭಾರತ ಭೂಪಟದ ನಕ್ಷೆಯಂತೆ ನಿಂತು, ಮಧ್ಯದಲ್ಲಿ ಅಶೋಕ ಚಕ್ರವನ್ನು ಅಳವಡಿಸಿ ನಿರ್ಮಿಸಿದ ಬೃಹತ್ ಮಾನವ ಸರಪಳಿ ನೆರೆದಿದ್ದವರಲ್ಲಿ ಭಾರೀ ದೇಶಪ್ರೇಮವನ್ನು ಮೂಡಿಸಿತು ಮತ್ತು ಎಲ್ಲರ ಗಮನ ಸೆಳೆಯಿತು. ​​ಕುಂಜತ್ತೂರು ಶಾಲೆಯಲ್ಲಿ ಶಾಲಾ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹಾಗೂ ಹೊಸಂಗಡಿ ಶಾಲೆಯಲ್ಲಿ ಶಾಲಾ ಚೇರ್ಮನ್…

Read More

ನಾಗರ ಪಂಚಮಿ ಹಬ್ಬಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ ನೀಡಲು ಬಾಕುಡ ಸಮಾಜ ಆಗ್ರಹ

ಕಾಸರಗೋಡು: ತುಳುನಾಡಿನ ಹಿಂದೂ ಸಮಾಜದ ಎಲ್ಲಾ ಜಾತಿ-ವರ್ಗದವರು ಭಕ್ತಿ ಮತ್ತು ಸಡಗರದಿಂದ ಆಚರಿಸುವ ಪ್ರಮುಖ ಹಬ್ಬವಾದ ನಾಗರ ಪಂಚಮಿಗೆ ಕಾಸರಗೋಡು ಜಿಲ್ಲೆಯಲ್ಲಿ ಪ್ರಾದೇಶಿಕ ರಜೆ ನೀಡುವಂತೆ ಬಾಕುಡ ಸಮಾಜ ಆಗ್ರಹಿಸಿದೆ. ನಾಗರ ಪಂಚಮಿ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ದೇವಸ್ಥಾನಗಳು ಹಾಗೂ ತರವಾಡುಗಳಲ್ಲಿ ಭಕ್ತರು ಒಗ್ಗೂಡಿ ನಾಗದೇವರಿಗೆ ಹಾಲು ಮತ್ತು ಸೀಯಾಳದ ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ. ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ, ನಾಗರ ಪಂಚಮಿ ದಿನದಂದು ಕಾಸರಗೋಡು…

Read More

ಪಾವೂರು ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮಂಜೇಶ್ವರ: ಪಾವೂರು ಮಹಾತ್ಮಾ ಗಾಂಧಿ ಸರ್ಕಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಶೋಕ್ ಪಾವೂರು ಅವರು ಧ್ವಜಾರೋಹಣ ನೆರವೇರಿಸಿದರು. ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ವಾರ್ಕಾಡಿ ಗ್ರಾಮ ಪಂಚಾಯತ್ ಸದಸ್ಯ ಸಿದ್ದಿಕ್ ಪಾವೂರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪಾವೂರಿನ ಮಾಜಿ ಪೋಸ್ಟ್‌ಮಾಸ್ಟರ್ ಥ್ಯಾಂಪಣ್ಣ ರೈ, ಮಹಮ್ಮದ್ ಕುಂಡಾಪು, ಹಾರಿಸ್ ಕುಂಡಾಪು, ಸುಧಾಕರ ಶೆಟ್ಟಿ ಪಾವೂರು, ಪಾವೂರು ಪೋಸ್ಟ್‌ಮಾಸ್ಟರ್ ಪ್ರಕಾಶ್ ಕಾಪು, ಆಸೀಫ್ ಪಾವೂರು, ತ್ರಿಶಾಂಕ್…

Read More
error: Content is protected !!