ಪಾವೂರು ಅಂಗನವಾಡಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಪಾವೂರು: ಪಾವೂರು ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರು, ಪುಟಾಣಿ ಮಕ್ಕಳು, ಪೋಷಕರು ಹಾಗೂ ಸ್ಥಳೀಯ ಗಣ್ಯರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮ ದೇಶಭಕ್ತಿಯ ವಾತಾವರಣಕ್ಕೆ ಸಾಕ್ಷಿಯಾಯಿತು. ಕಾರ್ಯಕ್ರಮದ ಸ್ವಾಗತ ಭಾಷಣವನ್ನು ಅಂಗನವಾಡಿ ಶಿಕ್ಷಕಿ ಶೈಲಜಾ ಅವರು ನೆರವೇರಿಸಿದರು. ಅಬೂಬಕ್ಕರ್ ಸಿದ್ದಿಕ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ವರ್ಕಾಡಿ ಪಂಚಾಯತ್ ಅಧ್ಯಕ್ಷ ಪುತ್ತು ಚಾ ಅವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು…
