ಆಗಸ್ಟ್ 30 ರಂದು ಮಂಜೇಶ್ವರದಲ್ಲಿ ರಾಯರ ಭಕ್ತರು ಮಂಜೇಶ್ವರ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355 ನೇ ಆರಾಧನಾ ಮಹೋತ್ಸವ. ಮಂತ್ರಾಲಯದಲ್ಲಿ ಮಠಾಧಿಪತಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.
ಮಂಜೇಶ್ವರ: ರಾಯರ ಭಕ್ತರು ಮಂಜೇಶ್ವರ ವತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355 ನೇ ಆರಾಧನಾ ಮಹೋತ್ಸವ ಆಚರಣೆಯು ಆಗಸ್ಟ್ 30 ರಂದು ಭಾನುವಾರ ವಿವಿಧ, ವೈದಿಕ ಕಾರ್ಯಕ್ರಮಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ 66 ಮಂಜೇಶ್ವರ ಹೊಸಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ವೃಂದಾವನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಮಂತ್ರಾಲಯದ ಮಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಬಿಡುಗಡೆಗೊಂಡಿತು. ಬಳಿಕ…
