ಭವ್ಯ ಭಾರತವನ್ನು ನಿರ್ಧರಿಸುವವರು ಯುವ ಸಮೂಹ ಆಗಿರಬೇಕು – ಅಬ್ದುಲ್ ಮಜೀದ್
ಮಂಗಳೂರು (ಆ.12): ಯಂಗ್ ಡೆಮಾಕ್ರಟ್ಸ್ ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕರ್ನಾಟಕ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ ಯವರ ಅಧ್ಯಕ್ಷತೆಯಲ್ಲಿ ಮಂಗಳೂರು ಪುರಭವನದಲ್ಲಿ ನಡೆಯಿತು.ಕರ್ನಾಟಕ ರಾಜ್ಯ ಜಾಯಿಂಟ್ ಕನ್ವೀನರ್ ಅಶರ್ ನಾಗುಂಡಿ ಕಾರ್ಯಕ್ರಮದ ಮೊದಲು ಧ್ವಜಾರೋಹಣ ನೆರೆವೇರಿಸಿದರು. ಈ ಕಾರ್ಯಕ್ರಮದಲ್ಲಿ ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಹಾಗೂ ನಗರ ಸಮಿತಿಗಳ ನೂತನ ಪದಾಧಿಕಾರಿಗಳನ್ನು ಅಧಿಕೃತವಾಗಿ ಘೋಷಿಸಲಾಯಿತು. ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಕನ್ವೀನರ್ ಆಗಿ ನ್ಯಾಯವಾದಿ ಅಸ್ಮಾ…
