ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರು ಮನೆಯಲ್ಲಿ ಕಳ್ಳತನ – ಮಹಾರಾಷ್ಟ್ರ ಮೂಲದ ಆರೋಪಿಯ ಬಂಧನ
ಮಂಗಳೂರು ಜೆಪ್ಪಿಮೊಗರು ಮನೆಯಲ್ಲಿ ಯಾರು ಇಲ್ಲದೆ ಅವಧಿಯಲ್ಲಿ ದಿನಾಂಕ 04-08-2026 ರಂದು ಯಾರೋ ಕಳ್ಳರು ಮನೆಯ ಬಾಗಿಲಿಗೆ ಅಳವಡಿಸಿದ್ದ ಬೀಗವನ್ನು ಯಾವುದೋ ಆಯುಧದಿಂದ ಮುರಿದು ಮನೆಯೊಳಗೆ ನುಗ್ಗಿ ಮನೆಯ ಕಪಾಟಿನಲ್ಲಿರುವ 14 ಗ್ರಾಂ ಚಿನ್ನದ ಸರ, ತಲಾ 2 ಗ್ರಾಂ ತೂಕ ಇರುವ 2 ಉಂಗುರ ಹಾಗೂ 25.000/- ನಗದು ಹಣವನ್ನು ಕಳ್ಳತನ ಮಾಡಿರುವುದಾಗಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 106/2026 ಕಲಂ 305(a),331(3) ಬಿ.ಎನ್.ಎಸ್ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿದಂತೆ…
