ಗತ ವೈಭವದ ಬ್ರ್ಯಾಂಡ್ ಮಂಗಳೂರು ಕಟ್ಟಲು ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್ ಸಹಯೋಗದಲ್ಲಿ ಡಿ. 27ರಂದು ‘ನಶೆ ಮುಕ್ತ ಮಂಗಳೂರು’ ಅಭಿಯಾನ

ಮಂಗಳೂರು: ಮೇಕ್ ಎ ಚೇಂಜ್ ಫೌಂಡೇಶನ್ ವತಿಯಿಂದ ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ನಶೆ ಮುಕ್ತ ಮಂಗಳೂರು ಅಭಿಯಾನವನ್ನು ಆಯೋಜಿಸಲಾಗಿದೆ.ಯುವ ಜನತೆಯಲ್ಲಿ ಮಾದಕ ದ್ರವ್ಯಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸೃಜನಾತ್ಮಕ ಸಮಾಜ ಕಟ್ಟುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಅಭಿಯಾನವನ್ನು ಡಿ. 27ರಂದು ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಮೇಕ್ ಎ ಚೇಂಜ್ ಫೌಂಡೇಶನ್‌ನ ಸಂಸ್ಥಾಪಕ ಹಾಗೂ ಅಧ್ಯಕ್ಷ ಸುಹೈಲ್ ಕಂದಕ್ ತಿಳಿಸಿದರು. ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನ

ಮಂಗಳೂರು: ಸಂವಿಧಾನ‌ ಶಿಲ್ಪಿ, ಭಾರತ ರತ್ನ‌ ಡಾ. ಬಿ. ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲದ ಎಸ್ಸಿ ಮೋರ್ಚಾ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಗೌರವಪೂರ್ವಕ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಬಾಬಾ ಸಾಹೇಬರು ಕೇವಲ ದಲಿತರ ಪರ ಹೋರಾಟಗಾರ ಅಲ್ಲ. ಈ ದೇಶದ ಪ್ರತಿಯೊಬ್ಬ ಅಸಹಾಯಕನ ಶೋಷಿತನ ಪರವಾಗಿ ಮಿಡಿದ ಮಹಾ ಮಾನವತಾವಾದಿ ಅವರು….

Read More

ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ

ಬೆಂಗ್ರೆ-ತಣ್ಣೀರುಬಾವಿ ಪರಿಸರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಇಲ್ಲಸಲ್ಲದ ನೂತನ ನಿಯಮದಿಂದಾಗಿ ಅನೇಕ ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ಕತ್ತಲೆಯಲ್ಲಿ ಬದುಕು ನಡೆಸುವಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇವಲ ಹಕ್ಕುಪತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ಕಳೆದ ಅನೇಕ ವರ್ಷಗಳಿಂದ ಯಾವುದೇ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಗ್ರಾಮ ಲೆಕ್ಕಾಧಿಕಾರಿಗಳು ನೀಡುವ ವಾಸ್ತವ್ಯ ದೃಢೀಕರಣ ಪತ್ರವೇ ಸಾಕಿತ್ತು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಅದೇ ನಿಯಮವಿದ್ದು ಸ್ಥಳೀಯರಿಗೆ ಯಾವುದೇ ತೊಂದರೆಯಾಗಿರಲಿಲ್ಲ. ಆದರೆ ಇದೀಗ ರಾಜ್ಯ…

Read More

ಕನ್ನಡದ ಬಹುನಿರೀಕ್ಷಿತ ಸಿನೆಮಾ “ವಾದಿರಾಜ ವಾಲಗ ಮಂಡಳಿ”ಗೆ ಉರ್ವಾ ಮಾರಿಯಮ್ಮ ಸಾನಿಧ್ಯದಲ್ಲಿ ನಡೆಯಿತು ಸಂಭ್ರಮದ ಮುಹೂರ್ತ … !

ಮಂಗಳೂರು: ಕನ್ನಡದ ಬಹುನಿರೀಕ್ಷಿತ “ವಾದಿರಾಜ ವಾಲಗ ಮಂಡಳಿ” ಚಲನಚಿತ್ರಕ್ಕೆ ಮಂಗಳೂರಿನ ಉರ್ವಾ ಮಾರಿಯಮ್ಮನ ಸಾನಿಧ್ಯದಲ್ಲಿ ಶುಕ್ರವಾರ ಮುಹೂರ್ತ ನಡೆಯಿತು. ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯ ನಿರ್ಮಾಣದಲ್ಲಿ ಮೂಡಿಬರುವ ಈ ಚಿತ್ರದ ಚಿತ್ರೀಕರಣ 3. ಯಶಸ್ವಿಯಾಗಿ ನಡೆದು ಚಿತ್ರ ಜನಮೆಚ್ಚುಗೆ ಗಳಿಸಲಿ ಎಂಬ ನಿಟ್ಟಿನಲ್ಲಿ ಮಾರಿಯಮ್ಮ ದೇವಿಯ ಸಮ್ಮುಖದಲ್ಲಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಚಲನಚಿತ್ರದ ಅನ್ನು ದೇವಿಯ ಚರಣದಲ್ಲಿ ಇಟ್ಟು ಪೂಜೆ ಸಲ್ಲಿಸಿದ ಬಳಿಕ, ಅರ್ಚಕರು ಪ್ರಾರ್ಥನೆ ಸಲ್ಲಿಸಿದರು. ದೇಗುಲದ ಮುಂಭಾಗದಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್…

Read More

ಸ್ವೀಕರ್ ಖಾದರ್ ಭ್ರಷ್ಟಾಚಾರದಿಂದ ಸಭಾಪತಿ ಸ್ಥಾನಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡಿದ್ದಾರೆ ; ಶಾಸಕ ಡಾ.ವೈ. ಭರತ್ ಶೆಟ್ಟಿ ಆಕ್ರೋಶ

ಮಂಗಳೂರು: ವಿಧಾನಸಭೆಯ ಸಭಾಧ್ಯಕ್ಷರ ಕಚೇರಿಯಲ್ಲಿ ಆಡಳಿತಾತ್ಮಕ ಸುಧಾರಣೆಯ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿಗಳ ಭ್ರಷ್ಟಾಚಾರ ನಡೆದಿದ್ದಲ್ಲದೆ ಇದಕ್ಕಾಗಿ ದುಂದುವೆಚ್ಚ ಮಾಡಲಾಗಿದೆ. ಈ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಒತ್ತಾಯಿಸಿದರು . ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ವಿಧಾನಸಭೆಯ ಆಡಳಿತವು ಆಡಳಿತಾತ್ಮಕ ಸುಧಾರಣೆ ಹೆಸರಿನಲ್ಲಿ ಭಾರೀ ಅವ್ಯವಹಾರಗಳನ್ನು ನಡೆಸಿದೆ ಎಂಬ ಸಂಶಯಗಳು ಮತ್ತು…

Read More

ಅಪೂರ್ಣವಾಗಿಯೇ ಉಳಿದಿರುವ ಬೆಂದೂರ್ವೆಲ್ ನ ಕಾಂಕ್ರೀಟಿ ರಸ್ತೆ … !

ಸಂತ ಥೆರೆಸಾ ಶಾಲೆಯ ಮುಂದಿನ ಬೆಂದೂರ್ವೆಲ್ ರಸ್ತೆಯು ಸಂಪೂರ್ಣ ಕಾಂಕ್ರೀಟಿಕರಣವಾಗದೆ ಹಾಗೆಯೇ ಉಳಿದು ಕೊಂಡಿದೆ . ಇದು ಯಾವಾಗ ಪೂರ್ತಿಯಾಗುತ್ತೋ ಎನ್ನುವ ಯಕ್ಷ ಪ್ರಶ್ನೆಯೊಂದು ಉದ್ಭವಿಸಿದೆ . ಕಳೆದ ಕೆಲವಾರು ದಿನಗಳಿಂದ ರಸ್ತೆಯ ಕಾಂಕ್ರೀಟಿಕರಣ ಸಂಪೂರ್ಣ ಆಗದ ಕಾರಣ ಈ ಮಾರ್ಗವಾಗಿ ಸಂಚಾರ ನಡೆಸುವ ವಾಹನಗಳಿಗೆ ತೊಂದರೆ ಯಾಗಿದೆ. ದಿನ ನಿತ್ಯವೂ ಈ ಮಾರ್ಗವಾಗಿ ಹಲವು ವಾಹನಗಳು ಸಂಚಾರ ನಡೆಸುತ್ತದೆ . ಈ ಮಾರ್ಗದ ಕಾಂಕ್ರೀಟಿಕರಣವನ್ನು ಆದಷ್ಟು ಬೇಗನೇ ಪೂರ್ಣಮಾಡಿ ವಾಹನ ಸವಾರರ ಸಂಚಾರಕ್ಕೆ ಅನುವುವಾಗುವಂತೆ ಸ್ಥಳೀಯ…

Read More

ಅಕ್ಟೋಬರ್ 19 ರಂದು ಮಂಗಳೂರಿನ ಬೆಂದೂರಿನಲ್ಲಿ ಶುಭಾರಂಭಗೊಳ್ಳಲಿರುವ ಬಿಂದು ಜ್ಯುವೆಲ್ಲರಿ ನೂತನ ಶಾಖೆ.

ಮಂಗಳೂರು: ನಂಬಿಕೆ, ಶುದ್ಧತೆ ಮತ್ತು ನಾವೀನ್ಯ ಕರಕುಶಲತೆಗೆ ಹೆಸರುವಾಸಿಯಾದ ಬಿಂದು ಜ್ಯುವೆಲ್ಲರಿಯ ನೂತನ ಶಾಖೆಯು ಅಕ್ಟೋಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಬೆಂದೂರಿನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬಿಂದು ಜ್ಯುವೆಲ್ಲರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಭಿಲಾಷ್ ಕೆವಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಕಳೆದ ನಾಲ್ಕು ದಶಕಗಳ ಶ್ರೇಷ್ಠತೆಯನ್ನು ಹೆಮ್ಮೆಯಿಂದ ಆಚರಿಸಿಕೊಂಡು ಬರುತ್ತಿರುವ ಈ ಸಂಸ್ಥೆಯು ಕರ್ನಾಟಕದಲ್ಲಿ ಎರಡನೇ ಮಳಿಗೆಯನ್ನು ತೆರೆಯುತ್ತಿರುವುದು ಸಂತಸವನ್ನು ತಂದಿದೆ…

Read More

ಬೇರೆ ಎಲ್ಲಾ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನಾ ಶಿಬಿರಗಳು. ಇದರಿಂದ ಲಕ್ಷಾಂತರ ಮಂದಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಇದು ಸಮಾಜಕ್ಕೆ ಪ್ರೇರಣೆ ನೀಡುವ ಕೆಲಸವಾಗಿದೆ- ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಪುತ್ತೂರಿನಲ್ಲಿ ಹೇಳಿಕೆ

ಪುತ್ತೂರು; ಪಂಚೇಂದ್ರಿಯನ್ನು ಹತೋಟಿಯಲ್ಲಿ ಇಡುವ ಕಾರ್ಯ ಮಾಡಬೇಕಾಗಿದ್ದು, ತರಬೇತಿ ಮೂಲಕ ಇದನ್ನು ಯಶಸ್ವಿಯಾಗಿಸಬಹುದು. ಮದ್ಯ ವ್ಯಸನ ಮುಕ್ತವಾಗುವುದರಿಂದ ಸಂಸಾರಕ್ಕೆ ನೆಮ್ಮದಿ ನೀಡುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು. ಪುತ್ತೂರಿನ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು….

Read More

ಮಿಂಚಿಪದವು ಶ್ರೀ ಕ್ಷೇತ್ರ ಸನ್ನಿಧಿಯಲ್ಲಿ ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಸಂಭ್ರಮ

ಮಂಗಳೂರು: ಕಾಸರಗೋಡು ಜಿಲ್ಲೆಯ ಮಿಂಚಿಪದವು ಶ್ರೀ ಮಹಾಲಿಂಗೇಶ್ವರ ಕ್ಷೇತ್ರಕ್ಕೆ ಹೊಂದಿಕೊಂಡಿರುವಂತೆ ಪೂರ್ವ ದಿಕ್ಕಿನಲ್ಲಿ ನೈಸರ್ಗಿಕವಾಗಿ ಗುಹಾದ್ವಾರದ ಮೂಲಕ ನಿರಂತರವಾಗಿ ಪ್ರವಹಿಸುವ ಮಾತೃ ಸ್ವರೂಪಿಣಿಯಾದ ಮಾತೆಯ ಸನ್ನಿಧಾನವೇ ಕಾವೇರಿಯಮ್ಮನ ಪುಷ್ಕರಿಣಿ. ಇಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ದಿನಾಂಕ ಅಕ್ಟೋಬರ್ 17 ರ ತುಲಾ ಸಂಕ್ರಮಣದಂದು ಅಪರಾಹ್ನ 1.46 ರ ಶುಭ ವೇಳೆಯಲ್ಲಿ ಕಾವೇರಿ ತೀರ್ಥೋದ್ಭವ ಸಂಭ್ರಮ ನಡೆಯಲಿದೆ ಎಂದು ಕಾವೇರಿಯಮ್ಮ ಬ್ರಹ್ಮಕಲಶ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಮಧುಸೂಧನ್ ಆಯರ್ ತಿಳಿಸಿದರು. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ…

Read More

ಪುತ್ತೂರಿನ ಇಬ್ಬರು ಮಹಿಳಾ ಸಹೋದ್ಯೋಗಿಗಳು ನಾಪತ್ತೆ

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆಯಾದ ಯುವತಿಯರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ವರದಿಯ ಪ್ರಕಾರ, ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Read More
error: Content is protected !!