ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ: ಅಮೆರಿಕ-ಇರಾನ್ ಸಂಘರ್ಷ ತೀವ್ರ

ವಾಷಿಂಗ್ಟನ್/ತೆಹ್ರಾನ್: ಅಮೆರಿಕ-ಇರಾನ್ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆ, ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಸ್ಟ್ರೈಟ್ ಆಫ್ ಹಾರ್ಮುಜ್ ಸುತ್ತ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ.

ಇರಾನ್ ರಾಜ್ಯ ಟಿವಿ ವರದಿ ಪ್ರಕಾರ, ಹೊಸ ಐಆರ್‌ಜಿಸಿ ನಿಯಮಗಳ ಅಡಿಯಲ್ಲಿ ಹೆಚ್ಚಿನ ಹಡಗುಗಳು ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುತ್ತಿವೆ. ಈ ನಡುವೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅಮೆರಿಕದ ಮೇಲೆ ಇರಾನ್‌ಗೆ ವಿಶ್ವಾಸವಿಲ್ಲ ಎಂದು ಹೇಳಿದ್ದು, ಅಮೆರಿಕ ಗಂಭೀರ ನಿಲುವು ತಾಳಿದರೆ ಮಾತ್ರ ಸಾಧ್ಯ ಮಾತುಕತೆ ಎಂದು.

ಆದಾಗ್ಯೂ, ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳೊಂದಿಗೆ ವ್ಯಾಪಾರ ಮುಂದುವರಿಸಲು ಇರಾನ್ ಆಸಕ್ತಿ ಹೊಂದಿದೆ ಎಂದು ಅವರು ಹೇಳಿದರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಎಲ್‌ಪಿಜಿ ಸರಬರಾಜು ಸಂಬಂಧಿತ ತಾಂತ್ರಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಜಾಗತಿಕ ಇಂಧನ ಸಂಕಷ್ಟದ ಪರಿಣಾಮ ಕಡಿಮೆ ಮಾಡಲು ಈ ಒಪ್ಪಂದವು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ, ಕ್ಸಿ ಜಿನ್‌ಪಿಂಗ್ ಮತ್ತು ಡೊನಾಲ್ಡ್ ಟ್ರಂಪ್ ನಡುವಿನ ಮಾತುಕತೆಯಲ್ಲಿ ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಬಗ್ಗೆ ಚರ್ಚೆಯಾಗಿದೆ. ಇದೇ ಸಂದರ್ಭದಲ್ಲಿ ಇರಾನ್ ಕೆಲವು ಚೀನೀ ಹಡಗುಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಅನುಮತಿ ನೀಡಲು ಆರಂಭಿಸಿದೆ ಎಂಬ ವರದಿಗಳು ಹೊರಬಿದ್ದಿವೆ.

ಜಾಗತಿಕ ಇಂಧನ ಸರಬರಾಜು, ತೈಲ ಬೆಲೆ ಹಾಗೂ ರಾಜತಾಂತ್ರಿಕ ಸಂಬಂಧಗಳ ದೃಷ್ಟಿಯಿಂದ ಹಾರ್ಮುಜ್ ಜಲಸಂಧಿಯ ಬೆಳವಣಿಗೆಗಳು ಇದೀಗ ವಿಶ್ವದ ಗಮನ ಸೆಳೆದಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!