ಪಹಲ್ಗಾಮ್ ದಾಳಿ ನಡೆದ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಿಲ್ಲ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಹೀಗಾಗಿ ಇದು ವಿಮಾನ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದ್ದು ವಿಮಾನಯಾದ ಕಂಪನಿಗಳು ಪ್ರಮುಖ ಬದಲಾವಣೆಗಳನ್ನು ಮಾಡಿದೆ.
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಮೊದಲ ಬಾರಿಗೆ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಅಮಾಯಕ ಜನರು ಬಲಿಯಾಗಿದ್ದಾರೆ. ಇದರಿಂದ ಭಾರತ ಸರ್ಕಾರ ಮತ್ತು ಪಾಕಿಸ್ತಾನದ ಮಧ್ಯೆ ಸಕ್ಕತ್ ಫೈಟ್ ನಡೀತಿದೆ. ಇದು ಬೇರೆ ನಾಗರಿಕರ ಮೇಲೆಯೂ ಪರಿಣಾಮ ಬೀರಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಉದ್ಭವಿಸಿರುವ ಪರಿಸ್ಥಿತಿಯಿಂದಾಗಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ವಿರುದ್ಧ ಹಲವಾರು ಕ್ರಮಗಳನ್ನು ತೆಗೆದುಕೊಂಡಿವೆ. ಈ ನಿಟ್ಟಿನಲ್ಲಿ, ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ಅಂದರೆ, ಯಾವುದೇ ಭಾರತೀಯ ವಿಮಾನಯಾನ ಸಂಸ್ಥೆಯು ಪಾಕಿಸ್ತಾನದ ಮೇಲೆ ಹಾರಲು ಸಾಧ್ಯವಾಗುವುದಿಲ್ಲ.