ಟೆಹ್ರಾನ್: ಇರಾನ್–ಅಮೆರಿಕ ಮಾತುಕತೆ ಒಪ್ಪಂದ ಇನ್ನೂ ಅಂತಿಮವಾಗಿಲ್ಲ: ಅಬ್ಬಾಸ್ ಅರಾಘ್ಚಿ

ಟೆಹ್ರಾನ್: ಅಮೆರಿಕದೊಂದಿಗೆ ನಡೆಯುತ್ತಿರುವ ಮಾತುಕತೆಗಳ ಒಪ್ಪಂದವು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ತಿಳಿಸಿದ್ದಾರೆ.

ಒಪ್ಪಂದದ ಕರಡು ನಿಯಮಗಳನ್ನು ಇರಾನಿನ ಮಾಧ್ಯಮಗಳಿಗೆ ಸೋರಿಕೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ವಿರುದ್ಧ ಟೀಕಿಸಿದ ಕೆಲವೇ ಸಮಯದಲ್ಲಿ ಅರಾಘ್ಚಿ ಈ ಸ್ಪಷ್ಟನೆ ನೀಡಿದ್ದಾರೆ.

“ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ. ಅಂತಿಮಗೊಳ್ಳುವವರೆಗೆ ಅದರ ವಿಷಯಗಳ ಕುರಿತು ಮಾಧ್ಯಮಗಳಲ್ಲಿ ಊಹಾಪೋಹಗಳನ್ನು ಹರಡುವುದನ್ನು ನಿಲ್ಲಿಸಬೇಕು,” ಎಂದು ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹೇಳಿದ್ದಾರೆ.

ಒಪ್ಪಂದದ ಎಲ್ಲಾ ವಿವರಗಳನ್ನು ಸೂಕ್ತ ಸಮಯದಲ್ಲಿ ಸಾರ್ವಜನಿಕರೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ.

ಟ್ರಂಪ್ ಅವರು ಕರಡು ನಿಯಮಗಳು ಇರಾನಿನ ಮಾಧ್ಯಮಗಳಿಗೆ ಸೋರಿಕೆಯಾಗಿವೆ ಎಂದು ಆರೋಪಿಸಿದ ಬೆನ್ನಲ್ಲೇ ಅರಾಘ್ಚಿ ಈ ಪ್ರತಿಕ್ರಿಯೆ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!