ಕರ್ನಾಟಕ ಸಂಘ ಶಾರ್ಜಾ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

ದುಬೈ: ಯುಎಇಯಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ಸಂಘ ಶಾರ್ಜಾದ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನ್‌ನಲ್ಲಿ ನಡೆಯಿತು.

ಪೂರ್ವ ಅಧ್ಯಕ್ಷ ಗಣೇಶ್ ರೈ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡ ಭಾಷೆ, ಸಂಸ್ಕೃತಿಯ ಉತ್ತೇಜನ ಹಾಗೂ ಅನಿವಾಸಿ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸುವ ಸಂಕಲ್ಪವನ್ನು ವಿಶ್ವನಾಥ್ ಶೆಟ್ಟಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಂಘದ ನೂತನ ಸದಸ್ಯರನ್ನು ಸ್ವಾಗತಿಸಲಾಯಿತು. ಸಲಹಾ ಮಂಡಳಿಯ ಸದಸ್ಯರು ಹಾಗೂ ಹಿರಿಯರು ನೂತನ ಸಮಿತಿಗೆ ಶುಭ ಹಾರೈಸಿ, ಸಂಘದ ಬೆಳವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿಘ್ನೇಶ್ ಕುಂದಾಪುರ ವಂದಿಸಿದರು; ರಿತೇಶ್ ಅಂಚನ್ ನಿರೂಪಿಸಿದರು

SHARE
Loading spinner

Leave a Reply

Your email address will not be published. Required fields are marked *

error: Content is protected !!