ರಿಯಾದ್: ಸೌದಿ ಅರೇಬಿಯಾದ ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವ ವಿದೇಶಿ ಎಂಜಿನಿಯರ್‌ಗಳಿಗೆ ದೊಡ್ಡ ಆಘಾತ ಎದುರಾಗಿದೆ. ಪ್ರಮುಖ 46 ಎಂಜಿನಿಯರಿಂಗ್ ಹುದ್ದೆಗಳಲ್ಲಿ 30% ಸೌದೀಕರಣ (Saudization) ಕಡ್ಡಾಯಗೊಳಿಸುವ ಹೊಸ ನಿಯಮ ಜಾರಿಗೆ ಬಂದಿದೆ.

ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ವಸತಿ ಸಚಿವಾಲಯದ ಸಹಯೋಗದಲ್ಲಿ ಹೊರಡಿಸಿರುವ ಈ ಆದೇಶವು 2026ರ ಜೂನ್ 30ರಿಂದ ದೇಶಾದ್ಯಂತ ಜಾರಿಯಾಗಿದೆ.
ಈ ಹೊಸ ನಿಯಮದಿಂದ ಸಂಬಂಧಿತ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 30% ವಿದೇಶಿ ಎಂಜಿನಿಯರ್‌ಗಳು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಈ ಕ್ರಮವು ಸೌದಿ ನಾಗರಿಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ.



