ನಿಜ್ಜರ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕದ ಕ್ರಮ

ವಾಷಿಂಗ್ಟನ್: ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡು ಬಂದಿದ್ದು, ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಹಾಗೂ ಆತನ ಆಪ್ತ ಸಹಚರ ಸತೀಂದರ್‌ಜೀತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕ ಫೆಡರಲ್ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಇದೇ ವೇಳೆ ಭಾರತ ಮೂಲದ ಅಂತರರಾಷ್ಟ್ರೀಯ ಸಂಘಟಿತ ಅಪರಾಧ ಜಾಲಗಳ ವಿರುದ್ಧ ಅಮೆರಿಕ, ಕೆನಡಾ ಮತ್ತು ಯುರೋಪಿನ ಕಾನೂನು ಜಾರಿ ಸಂಸ್ಥೆಗಳು ಜಂಟಿಯಾಗಿ ನಡೆಸಿದ ‘ಆಪರೇಷನ್ ಹಾರ್ಡ್‌ಬಾಲ್’ ಕಾರ್ಯಾಚರಣೆಯಲ್ಲಿ 24 ಮಂದಿಯನ್ನು ಬಂಧಿಸಿದ್ದು, ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

ಆರೋಪಪಟ್ಟಿಯ ಪ್ರಕಾರ, 2023ರ ಜೂನ್ 18ರಂದು ಕೆನಡಾದ ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆಗೀಡಾದ ಹರ್‌ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸಂಚನ್ನು ಲಾರೆನ್ಸ್ ಬಿಷ್ಣೋಯ್ ರೂಪಿಸಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಾಲಯದ ದಾಖಲೆಗಳಲ್ಲಿ ನಿಜ್ಜರ್ ಅವರನ್ನು “H.S.N.” ಎಂದು ಉಲ್ಲೇಖಿಸಲಾಗಿದೆ. ಈ ಆರೋಪಗಳನ್ನು ಅಮೆರಿಕ “ಆಪರೇಷನ್ ಹಾರ್ಡ್‌ಬಾಲ್” ಹೆಸರಿನ ಬಹುರಾಷ್ಟ್ರೀಯ ಕಾನೂನು ಜಾರಿ ಕಾರ್ಯಾಚರಣೆಯೊಂದಿಗೆ ಪ್ರಕಟಿಸಿದೆ. ಅಮೆರಿಕ, ಕೆನಡಾ ಹಾಗೂ ಯುರೋಪಿನ ತನಿಖಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಈ ಕಾರ್ಯಾಚರಣೆಯಲ್ಲಿ ಒಟ್ಟು 24 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ 11 ಮಂದಿ ಕ್ಯಾಲಿಫೋರ್ನಿಯಾದಲ್ಲಿ ಬಂಧಿತರಾಗಿದ್ದು, ಕೊಲೆ, ಸುಲಿಗೆ, ಮಾದಕವಸ್ತು ಕಳ್ಳಸಾಗಣೆ ಹಾಗೂ ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಭಾರತ ಮೂಲದ ಮೂರು ಅಪರಾಧ ಜಾಲಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪ ಎದುರಿಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!