ಇರಾನ್ ಮೇಲೆ ಸತತ ಮೂರನೇ ದಿನವೂ ವೈಮಾನಿಕ ದಾಳಿಗಳು ಮುಂದುವರಿದಿವೆ. ಕೊನಾರಕ್ ನಗರದ ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯತ್ನಿಸಲಾಗಿದೆ ಎಂದು ಇರಾನ್ ತಿಳಿಸಿದೆ. ಬುಶೆಹರ್ ಅಣು ಕೇಂದ್ರದ ಸಮೀಪ ಸೇರಿದಂತೆ ದಕ್ಷಿಣ ಇರಾನ್‌ನ ಹಲವು ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ ಮೇಲೆ ಯಾವ ಕ್ಷಣದಲ್ಲಾದರೂ ದಾಳಿ ನಡೆಸಲು ಇಸ್ರೇಲ್ ಸಿದ್ಧವಾಗಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಹೇಳಿದ್ದಾರೆ.

ಇರಾನ್‌ನ ಅಣು ಸ್ಥಾವರಗಳು ಸೇರಿದಂತೆ 170ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಆದರೆ ಕಳೆದ ಕೆಲವು ಗಂಟೆಗಳಲ್ಲಿ ಯಾವುದೇ ಹೊಸ ದಾಳಿ ನಡೆಸಿಲ್ಲ ಎಂದು ಅಮೆರಿಕ ಹೇಳಿಕೊಂಡಿದೆ.
ಇನ್ನೊಂದೆಡೆ, ರಕ್ಷಣಾತ್ಮಕ ಕ್ರಮಗಳು ಮತ್ತು ಪ್ರತಿದಾಳಿಗಳು ಮುಂದುವರಿಯಲಿವೆ ಎಂದು ಇರಾನ್ ಸ್ಪಷ್ಟಪಡಿಸಿದೆ. ಬಹ್ರೈನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ ಪ್ರತಿದಾಳಿ ನಡೆಸಿದೆ ಎಂದು ವರದಿಯಾಗಿದೆ.


